ಬೆಂಗಳೂರು: ನಮ್ಮ ಪಕ್ಷದ ಮೂವರೂ ಅಭ್ಯರ್ಥಿಗಳೂ ಜಯ ಸಾಧಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಮಂಗಳವಾರ ರಾಜ್ಯಸಭಾ ಚುನಾವಣೆಯ ಮತದಾನದ ವೇಳೆ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಖ್ಯಾಬಲದ ಪ್ರಕಾರ ಅಗತ್ಯ ಮತಗಳೇ ಇಲ್ಲದೇ ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆಲ್ಲಲು ಹೇಗೆ ಸಾಧ್ಯ ಎಂದರು.
ಆತ್ಮಸಾಕ್ಷಿಗೆ ಮತಹಾಕಿ ಎಂದು ಪ್ರತಿಪಕ್ಷದವರ ಮನವಿಗೆ ಪ್ರತಿಕ್ರಿಯಿಸಿದ ಸಿಎಂ ಆತ್ಮಸಾಕ್ಷಿ ಮತ ಎಂದರೇನು ಎಂದು ಪ್ರಶ್ನಿಸಿದರು. ಎಲ್ಲರೂ ಗೆಲ್ಲಬೇಕೆಂಬ ಉದ್ದೇಶದಿಂದ ಅಭ್ಯರ್ಥಿಗಳನ್ನು ಹಾಕುತ್ತಾರೆ. ಆದರೆ ಜೆಡಿಎಸ್ ಸೋಲುವ ಉದ್ದೇಶದಿಂದ ಅಭ್ಯರ್ಥಿಯನ್ನು ಹಾಕಿದೆ ಎಂದು ನುಡಿದ ಸಿಎಂ ಜೆಡಿಎಸ್ ಅಭ್ಯರ್ಥಿ ಗೆಲ್ಲಲು ಸಾಧ್ಯವೇ ಇಲ್ಲ. ಆದರೂ ಸಹ ಅವರು ಅಭ್ಯರ್ಥಿಯನ್ನು ನಿಲ್ಲಿಸಿರುವ ಉದ್ದೇಶವೇನು ಎಂದು ಟೀಕಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


