ಬೆಂಗಳೂರು: ಶಾಲೆಯಲ್ಲಿ ಕೊಟ್ಟ ಪ್ರೊಟೀನ್ ಮಾತ್ರೆಯಿಂದ 4 ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವುದಾಗಿ ಪೋಷಕರು ಆರೋಪ ಮಾಡಿದ್ದಾರೆ. ಈ ಘಟನೆ ಬನಶಂಕರಿಯ ಕಾವೇರಿ ನಗರದಲ್ಲಿ ನಡೆದಿದೆ. ಜೋಯಾ (9) ಮೃತ ಬಾಲಕಿಯಾಗಿದ್ದಾಳೆ.
ಕರಿಸಂದ್ರದ ನಮ್ಮೂರ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಮಕ್ಕಳಿಗೆ ಶಿಕ್ಷಕರು ಪೌಷ್ಠಿಕಾಂಶ ಮಾತ್ರೆ ನೀಡಿದ್ದು, ಇದನ್ನು ಸೇವಿಸಿದ ಜೋಯಾ ಅಲ್ಲೇ ಅಸ್ವಸ್ಥಳಾಗಿದ್ದಾಳೆ. ಕೂಡಲೇ ಶಾಲೆಯ ಶಿಕ್ಷಕರು ಸ್ಥಳೀಯ ಆಸ್ಪತ್ರೆಗೆ ಬಾಲಕಿಯನ್ನ ಸೇರಿಸಿದ್ದರು. ಆದರೆ ರಾತ್ರಿ ಬಾಲಕಿ ಮತ್ತೆ ಅಸ್ವಸ್ಥಳಾಗಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


