ಮಧುಗಿರಿ: ಮಧುಗಿರಿ ಅಥವಾ ಸಿರಾ ಭಾಗದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಎಂ.ಚಿದಾನಂದಗೌಡ ತಿಳಿಸಿದರು.
ತಾಲೂಕಿನ ಪುರವರ ಹೋಬಳಿಯ ಬಡಕನಹಳ್ಳಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಲೋಕೇಶ್ ಗೌಡ ಪರ ಮತಯಾಚನೆ ನಡೆಸಿ ಮಾತನಾಡಿದ ಅವರು, ಅತ್ಯಂತ ಹಿಂದುಳಿದ ಪ್ರದೇಶವಾಗಿರುವ ಮಧುಗಿರಿ ಹಾಗೂ ಸಿರಾ ಕ್ಷೇತ್ರಗಳು ಆರ್ಥಿಕವಾಗಿ ಪ್ರಗತಿ ಹೊಂದಬೇಕೆಂಬ ನಿಟ್ಟಿನಲ್ಲಿ ಈ ಭಾಗದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಬೇಕೆಂದು ಸರ್ಕಾರಕ್ಕೆ ಈಗಾಗಲೇ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಕಳೆದ ಬಾರಿ ಮತದಾರರು ವಿಶ್ವಾಸವಿಟ್ಟು ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಿದ್ದರು. ಆದರೆ, ಅವರು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ಜನರಲ್ಲಿ ವಿಶ್ವಾಸ ಕಳೆದುಕೊಂಡಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡಿರುವ ಅನೇಕ ಜನಪರ ಯೋಜನೆಗಳನ್ನು ಮುಂದಿಟ್ಟುಕೊಂಡು ನಮ್ಮ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕೆಂದು ಮತಯಾಚನೆ ಮಾಡುತ್ತಿದ್ದೇವೆ ಎಂದರು.
ಕ್ಷೇತ್ರದ ಗ್ರಾಮೀಣ ಭಾಗಗಳು ತುಂಬಾ ಹಿಂದುಳಿದ ಪ್ರದೇಶಗಳಾಗಿವೆ. ಈ ಭಾರಿ ಸ್ಥಳೀಯ ಸಂಸ್ಥೆಗಳಲ್ಲಿ ಮತದಾರರು ಯುವಕರನ್ನು ಹೆಚ್ಚಿನದಾಗಿ ಆಯ್ಕೆ ಮಾಡಿದ್ದು, ಅವರು ಆಯ್ಕೆಯಾಗಿರುವ ಕ್ಷೇತ್ರಗಳು ಅಭಿವೃದ್ದಿ ಹೊಂದಬೇಕೆಂಬ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಬಿಜೆಪಿ ಪಕ್ಷಕ್ಕೆ ಒಲವು ತೋರಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಮುಖಂಡರುಗಳಾದ ಎಂ.ಆರ್.ನಾಗರಾಜು, ಗಿರೇಗೌಡನಹಳ್ಳಿ ಕೃಷ್ಣಮೂರ್ತಿ, ನಂಜುಂಡ ಆರಾಧ್ಯ, ಸುರೇಶ್ ಗೌಡ, ಬಿ.ಆರ್.ಮಂಜುನಾಥ್, ಲಿಂಗರಾಜು, ಕೃಷ್ಣಪ್ಪ, ಶ್ರೀನಿವಾಸಮೂತಿ, ಶ್ರೀರಂಗಪ್ಪ, ಹರೀಶ್ ಹಾಗೂ ಮುಂತಾದವರು ಇದ್ದರು.
ವರದಿ: ಅಬಿದ್ ಮಧುಗಿರಿ
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700