ಬೆಂಗಳೂರು: ಕನ್ನಡದಲ್ಲಿ ಐಎಎಸ್ ಮಾಡಿದ ಮೊದಲ ಅಧಿಕಾರಿ ಹಾಗೂ ʻಬಾನಲ್ಲೆ ಮಧುಚಂದ್ರಕೆʼ ಸಿನಿಮಾ ನಟ ಕೆ.ಶಿವರಾಮ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಎಚ್ ಸಿ ಜಿ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದಾರೆ. ಕಾರ್ಡಿಯಕ್ ಅರೆಸ್ಟ್ ಹಾಗೂ ಬ್ರೈನ್ ಡೆಡ್ ಆಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ನಟನ ಪರಿಸ್ಥಿತಿ ಚಿಂತಾಜನಕವಾಗಿದ್ದು ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ಕನ್ನಡದಲ್ಲೇ ಐಎಎಸ್ ಬರೆದು, ನಂತರ ಬೆಂಗಳೂರು, ವಿಜಯಪುರ, ಕೊಪ್ಪಳ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಅವರು ಕೆಲಸ ಮಾಡಿದ್ದಾರೆ. ʻಬಾನಲ್ಲೆ ಮಧುಚಂದ್ರಕೆʼ , ʻವಸಂತಕಾವ್ಯʼ ಚಿತ್ರದಲ್ಲಿ ನಟಿಸಿದ್ದರು. ರಾಜಕೀಯ ರಂಗದಲ್ಲೂ ನಟ ಗುರುತಿಸಿಕೊಂಡಿದ್ದರು. ಪ್ರತಿಭಟನೆ, ಯಾರಿಗೆ ಬೇಡ ದುಡ್ಡು, ಪ್ರೀತಿಗಾಗಿ ಆಟ, ನಾಗ, ಮೂಡಲ ಸೀಮೆಯಲಿ, ಸುಭಾಷ್, ಟೈಗರ್ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟರಾಗಿದ್ದರು. ತಮ್ಮ ಸಿನಿ ಜೀವನದಲ್ಲಿ 2017ರವರೆಗೆ 10 ಸಿನೆಮಾದಲ್ಲಿ ನಟಿಸಿದ್ದಾರೆ. ಈಗ ನಟನಿಗೆ 71 ವರ್ಷ.
ʻಬಾ ನಲ್ಲೆ ಮಧುಚಂದ್ರಕೆʼ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿದ್ದ ಕೆ ಶಿವರಾಮ್ ವೃತ್ತಿಯಲ್ಲಿ ಐಎಎಸ್ ಅಧಿಕಾರಿಯಾಗಿದ್ದರು. ನಂತರ ʻವಸಂತ ಕಾವ್ಯʼ , ʻಸಾಂಗ್ಲಿಯಾನ 3ʼ ಖಳ ನಾಯಕ ಮುಂತಾದ ಚಿತ್ರಗಳಲ್ಲಿ ನಟಿಸಿದರು. ಕನ್ನಡದಲ್ಲಿಯೇ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ಮೊದಲ ಕನ್ನಡಿಗರು ಶಿವರಾಮ್. ಸುದೀರ್ಘ ಐಎಎಸ್ ವೃತ್ತಿಜೀವನದಲ್ಲಿ ಬಿಜಾಪುರ, ಬೆಂಗಳೂರು, ಮೈಸೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


