ತುರುವೇಕೆರೆ : ತಾಲೂಕಿನ ಕಸಬಾ ಹೋಬಳಿ ಲೋಕಮ್ಮನಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ಬಗ್ಗೆ ಸಾರ್ವಜನಿಕರು ತುಮಕೂರಿನ ಲೋಕಾಯುಕ್ತರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಲೋಕಾಯುಕ್ತ ತಂಡ ದಿಢೀರ್ ದಾಳಿ ನಡೆಸಿ ಹಲವು ದಾಖಲೆ ಪತ್ರಗಳನ್ನು ಪರಿಶೀಲಿಸಿ ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.
ಈ ಸ್ವತ್ತುಗಳ ಮಾಡಿಕೊಡುವ ನರೇಗಾ ಯೋಜನೆ ಬಗ್ಗೆ ಹಲವು ಅಕ್ರಮಗಳು ನಡೆದಿದ್ದು, ಸಿಬ್ಬಂದಿ ಹಾಜರಾತಿ ಅಕ್ರಮ ಖಾತೆ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ದಾಖಲಾತಿ ಮತ್ತು ಸರಿಯಾದ ಸಮಯಕ್ಕೆ ಸರಿಯಾಗಿ ಬಾರದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ಬಗ್ಗೆ ಗರಂ ಆದ ಲೋಕಾಯುಕ್ತ ಅಧಿಕಾರಿಗಳು ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಖಡಕ್ ವಾರ್ನಿಂಗ್ ನೀಡಿದರಲ್ಲದೇ, 15ನೇ ಹಣಕಾಸು ನಿರ್ವಹಣೆ ಬಗ್ಗೆ ಸಹ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿ ಇವುಗಳನ್ನು ಕೂಲಂಕುಶವಾಗಿ ತನಿಖೆ ನಡೆಸುವುದಾಗಿ ಹೇಳಿದರು.
ಇದಕ್ಕೂ ಮುನ್ನ ಹರಿದಾಸನಹಳ್ಳಿಯ ಅಂಗನವಾಡಿ ಮತ್ತು ಸರ್ಕಾರಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಕ್ಕಳಿಗೆ ಕೊಡುವ ಆಹಾರದ ಗುಣಮಟ್ಟ ಮತ್ತು ಶುಚಿತ್ವದ ಬಗ್ಗೆ ಕೆಲವು ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳಾದ ಶಿವರುದ್ರಪ್ಪ ಮೇಟಿ, ಗಿರೀಶ್, ಕರಿಯಪ್ಪ ಸೇರಿದಂತೆ ಲೋಕಾಯುಕ್ತ ಅಧಿಕಾರಿಗಳು ಇದ್ದರು.
ವರದಿ: ಸುರೇಶ್ ಬಾಬು ಎಂ., ತುರುವೇಕೆರೆ