ತುಮಕೂರು: ತುಮಕೂರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ ಸಂದರ್ಭದಲ್ಲಿ ಸ್ಥಳದಲ್ಲಿ ಬಂದೋಬಸ್ತ್ ನಲ್ಲಿದ್ದ ಡಿವೈಎಸ್ಪಿ ಚಂದ್ರಶೇಖರ್ ಅವರ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವೆಂಕಟೇಶ ಎಂಬ ಬಿಜೆಪಿ ಕಾರ್ಯಕರ್ತ ಪೊಲೀಸರೊಂದಿಗೆ ನಡೆದ ತಳ್ಳಾಟ ನೂಕಾಟದಲ್ಲಿ ಡಿವೈಎಸ್ಪಿ ಚಂದ್ರಶೇಖರ್ ಅವರ ಮೂಗಿಗೆ ರಕ್ತ, ಗಾಯ ಆಗೋ ರೀತಿಯಲ್ಲಿ ಹಲ್ಲೆ ನಡೆಸಿದ್ದು, ಹೀಗಾಗಿ ಆರೋಪಿ ವೆಂಕಟೇಶನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಾಳೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


