ಚಿಕ್ಕಮಗಳೂರು: ಭಾರತೀಯ ಸೇನೆಗೆ ಸೇರಲು ಅವಕಾಶ ಸಿಗಲಿಲ್ಲ ಎಂಬ ಕಾರಣದಿಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾರ್ತಿಕ್(23) ಮನನೊಂದು ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.
ಭಾರತೀಯ ಸೇನೆ ಸೇರುವ ಮಹತ್ವಾಕಾಂಕ್ಷೆ ಹೊತ್ತು ಪರೀಕ್ಷೆ ಎದುರಿಸಿದ್ದ ಯುವಕನೊಬ್ಬ ಪರೀಕ್ಷೆಯಲ್ಲಿ ಫೇಲ್ ಆದ ಬೇಸರದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾರ್ತಿಕ್ ಕಳೆದ ಎರಡು ವರ್ಷದಿಂದ ಸೇನಾ ಪರೀಕ್ಷೆಗೆ ಸಂಬಂಧಿಸಿ ಸಾಕಷ್ಟು ಸಿದ್ಧತೆಗಳನ್ನು ನಡೆಸಿದ್ದ. ಇತ್ತೀಚೆಗೆ ಪರೀಕ್ಷೆಯೂ ನಡೆದಿತ್ತು. ಫಲಿತಾಂಶ ಬರುವಾಗ ಕಾರ್ತಿಕ್ ಸೇನೆಗೆ ಸೆಲೆಕ್ಟ್ ಆಗಿರಲಿಲ್ಲ. ಇದರಿಂದ ಮನನೊಂದು ಈ ತೀರ್ಮಾನ ಮಾಡಿದ್ದ. ಬುಧವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಡೆತ್ ನೋಟ್: ʻʻಭಾರತೀಯ ಸೇನೆಯ ಪರೀಕ್ಷೆಯಲ್ಲಿ ಫೇಲ್ ಆಗಿದ್ದೇನೆ. ಇದನ್ನು ಮನೆಯವರಿಗೆ ಹೇಳುವ ಧೈರ್ಯ ನನ್ನ ಬಳಿ ಇಲ್ಲ. ಹೀಗಾಗಿ ನಿರ್ಗಮಿಸುತ್ತಿದ್ದೇನೆʼʼ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾನೆ.
ಈ ಬಗ್ಗೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


