ಹೊಸನಗರ: ಬೈಕ್ ನಲ್ಲಿ ಬಂದ ಅಪರಿಚಿತ ಯುವಕರು ಮಹಿಳೆಯೊಬ್ಬರಿಗೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ನಡೆದಿದೆ. ನಾಜೀಮಾ (38) ಚೂರಿ ಇರಿತಕ್ಕೊಳಗಾದ ಮಹಿಳೆ.
ಈ ಮಹಿಳೆಯು ಪಟ್ಟಣದ ಬ್ಯೂಟಿ ಪಾರ್ಲರ್ ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಇಲ್ಲಿನ ಗಣಪತಿ ದೇವಸ್ಥಾನ ರಸ್ತೆಯ ಸಮೀಪದ ಮನೆಯಲ್ಲಿ ಊಟ ಮುಗಿಸಿ ಪಾರ್ಲರ್ ಗೆ ಮರಳುತ್ತಿರುವಾಗ ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತ ಯುವಕರು ಹರಿತವಾದ ಚಾಕುವಿನಿಂದ ಬಲಗೈ ಬಲ ತೋಳಿನ ಮೇಲ್ಭಾಗ ಇರಿದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಗಾಯಗೊಂಡ ಮಹಿಳೆಯು ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


