ಧಾರವಾಡ: ಮಲಗಿದ್ದಾಗ ಅಳುತ್ತಿದ್ದ ಹೆಣ್ಣು ಮಗುವಿನ ಮೇಲೆ ಸಿಟ್ಟಿಗೆದ್ದ ತಂದೆ ಮಗುವನ್ನ ಗೋಡೆಗೆ ಎಸೆದು ಕೊಂದ ಅಮಾನುಷ ಕೃತ್ಯ ಧಾರವಾಡದಲ್ಲಿ ನಡೆದಿದೆ. ತನ್ನ ನಿದ್ದೆ ಹಾಳು ಮಾಡುತ್ತಿದೆ ಎಂದು ಕೋಪಗೊಂಡ ತಂದೆ ಒಂದು ವರ್ಷದ ಪುಟ್ಟ ಕಂದಮ್ಮನ ಗೋಡೆಗೆ ಎಸೆದು ಕೊಲೆ ಮಾಡಿದ್ದಾನೆ. ಒಂದು ವರ್ಷದ ಶ್ರೇಯಾ ಮೃತ ಮಗುವಾಗಿದೆ. ಶಂಭುಲಿಂಗಯ್ಯ ಶಾಪೂರಮಠ ಆರೋಪಿ ತಂದೆಯಾಗಿದ್ದಾನೆ.
ಒಂದು ವರ್ಷದ ಶ್ರೇಯಾಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಚಿಕಿತ್ಸೆ ಫಲಿಸದೆ ಮಗು ಮೃತಪಟ್ಟಿದೆ. ಕುಡಿತದ ನಶೆಯಲ್ಲಿದ್ದಾಗ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಸದ್ಯ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಗು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


