ಬೆಂಗಳೂರು: ಬೆಂಗಳೂರು ಗ್ರಾಮಾಂತರದ ಬಾಗಲಗುಂಟೆ ಬಳಿಯ ಡಿಫೆನ್ಸ್ ಕಾಲೋನಿಯಲ್ಲಿ ಎಚ್ ಒಡಿ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಡಿಫೆನ್ಸ್ ಕಾಲೋನಿಯ ಎನ್ ಟಿಟಿಎಫ್ ಕಾಲೇಜಿನ ವಿದ್ಯಾರ್ಥಿ ಋಷ್ಯಂತ್(18) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.
ಡಿಪ್ಲೋಮಾ ಇನ್ ಮೆಕ್ಯಾನಿಕ್ ಕೊನೆಯ ವರ್ಷದಲ್ಲಿ ಓದುತ್ತಿದ್ದ ಋಷ್ಯಂತ್ ಗೆ ಪ್ರಾಜೆಕ್ಟ್ ವರ್ಕ್ ಗೆ ಸಂಬಂಧಿಸಿ ಇಂಡಸ್ಟ್ರಿಯಲ್ ಮ್ಯಾನೇಜ್ ಮೆಂಟ್ ನ ಎಚ್‌ಒಡಿ ಶಿಜು ಗಂಗಧರ್ ಎಂಬವರು “ನೋಡೋಕೆ ಶವದಂತೆ ಇದ್ದೀಯ. ನಿನ್ನ ಪ್ರಾಜೆಕ್ಟ್ ಕೂಡ ಹಾಗೆ ಇದೆ” ಎಂದು ಅವಮಾನಿಸಿ ಬೈದಿದ್ದರು ಎನ್ನಲಾಗಿದೆ.
ಇದರಿಂದ ಮನನೊಂದ ಋಷ್ಯಂತ್ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಯಹತ್ಯೆ ಮಾಡಿಕೊಂಡಿಕೊಂಡಿದ್ದಾನೆ ಎನ್ನಲಾಗಿದೆ. ಬಾಗಲುಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


