ತುಮಕೂರು: ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಹೇರಂಭಾ ಅವರನ್ನು ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಹೋರಾಟಗಾರರ ವೇದಿಕೆಯ ಹೋರಾಟದ ಬೆನ್ನಲ್ಲೇ ವರ್ಗಾವಣೆ ಮಾಡಲಾಗಿದೆ.
ಹಲವು ವರ್ಷಗಳಿಂದ ಒಂದೇ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೇರಂಭಾ ಅವರನ್ನು ವರ್ಗಾವಣೆ ಮಾಡುವಂತೆ ಒತ್ತಾಯಿಸಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಹೋರಾಟಗಾರರ ವೇದಿಕೆಯ ರಾಜ್ಯಾಧ್ಯಕ್ಷ ಹೆಚ್.ಜಿ.ರಮೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಆದರೆ ವರ್ಗಾವಣೆ ಮಾಡುವಲ್ಲಿ ಜಿಲ್ಲಾಧಿಕಾರಿಗಳು ವಿಫಲವಾಗಿದ್ದರು. ಹೀಗಾಗಿ ಫೆ.27ರಂದು ಉಪವಾಸ ಸತ್ಯಾಗ್ರಹ ನಡೆಸಲಾಗಿತ್ತು. ಗುರುವಾರ ಉಪವಾಸ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆ ಕೊನೆಗೂ ಹೋರಾಟಕ್ಕೆ ಮಣಿದ ಜಿಲ್ಲಾಡಳಿತ ರಾಜಕೀಯ ಪ್ರಭಾವ ಬಳಸಿ ಹೇರಂಭಾ ಅವರನ್ನು ಗುಬ್ಬಿ ತಾಲೂಕಿಗೆ ವರ್ಗಾವಣೆ ಮಾಡಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆದೇಶಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಹೆಚ್.ಜಿ.ರಮೇಶ್, ಸಂವಿಧಾನ ಬದ್ಧವಾಗಿ ಕರ್ತವ್ಯ ನಿರ್ವಹಿಬೇಕಿದ್ದ ತುಮಕೂರು ಜಿಲ್ಲಾಧಿಕಾರಿಗಳು ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಒಬ್ಬ ಪ್ರಥಮ ದರ್ಜೆ ಸಹಾಯಕನನ್ನು ವರ್ಗವಣೆ ಮಾಡಲು ಮೀನಾ ಮೇಷ ಎಣಿಸಿ ಬಳಿಕ ಉಪವಾಸ ಸತ್ಯಾಗ್ರಹಕ್ಕೆ ಕುಳಿತ ಬಳಿಕ ಆಪ್ತ ಸಹಾಯಕನನ್ನು ವರ್ಗವಣೆ ಮಾಡಿದ್ದಾರೆ ಎಂದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇನ್ನೂ ಹಲವು ಅಧಿಕಾರಿಗಳು 10 –15 ವರ್ಷಗಳಿಂದ ಬೇರೂರಿದ್ದಾರೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೂರು ವರ್ಷಗಳ ಮೇಲ್ಪಟ್ಟ ಒಂದೆ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳನ್ನು ವರ್ಗವಣೆ ಮಾಡುವಂತೆ ಆದೇಶವಿದ್ದರೂ ಸಹ ಅದು ತುಮಕೂರು ಜಿಲ್ಲೆಯಲ್ಲಿ ಮಾತ್ರ ಕಾರ್ಯರೂಪಕ್ಕೆ ಬಂದಂತೆ ಕಾಣುತ್ತಿಲ್ಲ ಇದೆ ರೀತಿಯಲ್ಲಿ ಆಡಳಿತ ವ್ಯವಸ್ಥೆ ಮುಂದುವರಿದಲ್ಲಿ ಹೋರಾಟ ಅನಿವಾರ್ಯ ಎಂದು ಅವರು ಎಚ್ಚರಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


