ಬೆಂಗಳೂರು: ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿ ಆಹಾರ ಭದ್ರತೆ ಮತ್ತು ನರೇಗಾ ಕಾರ್ಯಕ್ರಮಗಳನ್ನು ವಿರೋಧಿಸಿದ್ದರು. ಇವು ಕಾಂಗ್ರೆಸ್ ಜಾರಿಗೆ ತಂದಿದ್ದ ಹಸಿವು ಮುಕ್ತ ಭಾರತದ ಕಾರ್ಯಕ್ರಮಗಳಾಗಿವೆ. ಬಿಜೆಪಿಯು ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತದೆ.
ಆದರೆ, ಕಾಂಗ್ರೆಸ್ ಹಸಿವು ಮುಕ್ತ ನಾಡನ್ನು, ಹಸಿವು ಮುಕ್ತ ದೇಶವನ್ನು ನಿರ್ಮಿಸಲು ಹೊರಟಿದೆ. ಇನ್ನು ಪಡಿತರ ವಿತರಕರಿಗೆ ಪ್ರತಿ ಕೆಜಿ ಅಕ್ಕಿಗೆ ಕಮಿಷನ್ ಮೊತ್ತವನ್ನು ಒಂದೂವರೆ ರೂಪಾಯಿಗೆ ಹೆಚ್ಚಳಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು.
ಅರಮನೆ ಮೈದಾನದಲ್ಲಿ ನಡೆದ ಅನ್ನಭಾಗ್ಯ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅನ್ನಭಾಗ್ಯ ಸೇರಿ ಬಡವರು, ಮಧ್ಯಮ ವರ್ಗದವರಿಗೆ ಕೊಟ್ಟ ಭಾಗ್ಯಗಳನ್ನು ಆಡಿಕೊಂಡಿದ್ದ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ದುರಂತ. ಇಂಥ ತಪ್ಪುಗಳನ್ನು ಮತ್ತೆ ಮತ್ತೆ ಮಾಡಬೇಡಿ, ಅನ್ನದಾತರು ದುಡಿದರೆ ದೇಶ ಬದುಕುತ್ತದೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


