ಹೃದಯಾಘಾತಕ್ಕೆ ಒಳಗಾಗಿ ಕಳೆದ 25 ದಿನಗಳಿಂದ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಚಿಕಿತ್ಸೆಯನ್ನು ಪಡೆಯುತ್ತಿದ್ದ ಮಾಜಿ ಐಎಎಸ್ ಅಧಿಕಾರಿ, ಖ್ಯಾತನಟ, ರಾಜಕಾರಣಿ ಕೆ. ಶಿವರಾಮ್ ಚಿಕಿತ್ಸೆ ಫಲಿಸದೇ ನಿನ್ನೆ ನಿಧನರಾಗಿದ್ದರು.
ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಕೆ. ಶಿವರಾಮ್ ಅವರ ಅಳಿಯ ಪ್ರದೀಪ್, ಇಂದು ಕೆ. ಶಿವರಾಂ ಅವರು ನಿಧನರಾಗಿದ್ದು ಇಂದು ಬೆಳಿಗ್ಗೆ 7 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಂತ್ಯಸಂಸ್ಕಾರ ಎಲ್ಲಿ ಮಾಡಬೇಕು ಅಂತಾ ಇನ್ನೂ ನಿರ್ಧಾರವಾಗಿಲ್ಲ.
ಕೆ. ಶಿವರಾಮ್ ಅವರ ಪತ್ನಿ ಮಲೇ ಮಹದೇಶ್ವರ ದೇವಸ್ಥಾನಕ್ಕೆ ಹೋಗಿದ್ದಾರೆ. ಅವರು ಬಂದ ಮೇಲೆ ಎಲ್ಲಿ ಅಂತ್ಯಕ್ರಿಯೆ ನಡೆಸಬೇಕು ಎಂದು ನಿರ್ಧರಿಸಲಾಗುತ್ತದೆ ಎಂದು ಪ್ರದೀಪ್ ತಿಳಿಸಿದ್ದಾರೆ.
ಶಿವರಾಮ್ ಅವರಿಗೆ 15 ದಿನಗಳ ಹಿಂದೆ ಅಧಿಕ ರಕ್ತದೊತ್ತಡದಿಂದ ಸಮಸ್ಯೆ ಆಗಿತ್ತು. ಇತ್ತೀಚೆಗೆ ಹೃದಯಾಘಾತ ಆಯಿತು. ಹೀಗಾಗಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಯಿತು. ಸಾವಿಗೂ ಮುನ್ನ ಅವರ ಮಿದುಳು ಕೂಡ ಕಾರ್ಯ ನಿರ್ವಹಿಸುವುದನ್ನು ನಿಲ್ಲಿಸಿಬಿಟ್ಟಿತ್ತು. ಅವರನ್ನು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


