ಇಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ 71ನೇ ಹುಟ್ಟುಹಬ್ಬ. ಎಂ.ಕೆ. ಸ್ಟಾಲಿನ್ ಒಬ್ಬ ಶ್ರೇಷ್ಠ ಆಡಳಿತಗಾರ ಎಂಬ ಖ್ಯಾತಿ ಗಳಿಸಿದ ಜನಪ್ರಿಯ ನಾಯಕ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನಾಯಕರು ಅವರಿಗೆ ಜನ್ಮದಿನದ ಶುಭಾಶಯ ಕೋರಿದರು. ಮರೀನಾ ಬೀಚ್ ನಲ್ಲಿರುವ ದಿವಂಗತ ಡಿಎಂಕೆ ನಾಯಕರಾದ ಸಿಎನ್ ಅಣ್ಣಾದೊರೈ ಮತ್ತು ಎಂ.ಕರುಣಾನಿಧಿ ಅವರ ಸ್ಮಾರಕಗಳಲ್ಲಿ ಸ್ಟಾಲಿನ್ ಶ್ರದ್ಧಾಂಜಲಿ ಸಲ್ಲಿಸಿದರು.
ತಮಿಳುನಾಡು ಮುಖ್ಯಮಂತ್ರಿ ತಿರು@ಎಂಕೆ ಸ್ಟಾಲಿನ್ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರು ದೀರ್ಘಾಯುಷ್ಯ ಮತ್ತು ಆರೋಗ್ಯವಂತರಾಗಿ ಬಾಳಲಿ” ಎಂದು ‘ಎಕ್ಸ್’ ಪೋಸ್ಟ್ ನಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ತಮಿಳುನಾಡು ಮುಖ್ಯಮಂತ್ರಿಗೆ ಅವರ ಜನ್ಮದಿನದಂದು ಶುಭ ಹಾರೈಸಿದ್ದಾರೆ. “ನಾನು ನಿಮಗೆ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯವನ್ನು ಬಯಸುತ್ತೇನೆ,” ಎಂದು ಅವರು ಹಾರೈಸಿದ್ದಾರೆ. ನಟ ಹಾಗೂ ರಾಜಕೀಯ ನಾಯಕ ಕಮಲ್ ಹಾಸನ್ ಕೂಡ ಸ್ಟಾಲಿನ್ ಅವರಿಗೆ ಶುಭ ಕೋರಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


