ಅಭಿಮಾನಿ ಅವರ ಕಾರನ್ನು ಹಿಂಬಾಲಿಸುತ್ತಾ ಬರುತ್ತಿದ್ದಾಗ ಆತನ ಕಾಲುಗಳ ಮೇಲೆಯೇ ಯಶ್ ಬೆಂಗಾವಲು ವಾಹನ ಹರಿದಿರುವ ಘಟನೆ ಬಗ್ಗೆ ವರದಿಯಾಗಿದೆ.
ಈ ಘಟನೆ ನಡೆದಿರೋದು ಬಳ್ಳಾರಿಯ ಹೊರವಲಯದಲ್ಲಿ ಇರುವ ಬಾಲಾಜಿ ಕ್ಯಾಂಪ್ ನಲ್ಲಿ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದ ವಸಂತ ಎಂಬ ಯುವಕನ ಕಾಲಿನ ಮೇಲೆ ಕಾರು ಹರಿದಿದ್ದು ಯುವಕ ಕಾಲಿಗೆ ಗಾಯವಾಗಿದೆ. ಬಳ್ಳಾರಿಯ ಬಾಲಾಜಿ ನಗರದಲ್ಲಿ ನೂತನವಾಗಿ ನಿರ್ಮಾಣವಾದ ಅಮೃತೇಶ್ವರ ಸ್ಪಟಿಕ ಲಿಂಗ ದೇವಸ್ಥಾನ ಉದ್ಘಾಟನೆಗೆ ಯಶ್ ಬಂದಿದ್ದರು. ಈ ವೇಳೆ ಯಶ್ ಅನ್ನು ನೋಡುವ ಸಲುವಾಗಿ ಅಲ್ಲಿಗೆ ಅವರ ಅಭಿಮಾನಿಗಳು ಕೂಡಾ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ತಮ್ಮ ನೆಚ್ಚಿನ ನಟನನ್ನು ನೋಡುವ ಭರದಲ್ಲಿ ಅಭಿಮಾನಿಗಳು ಯಶ್ ಇರುವ ಕಾರನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ಈ ವೇಳೆ ಅಚಾನಕಾಗಿ ಯಶ್ ಬೆಂಗಾವಲು ವಾಹನ ಅಭಿಮಾನಿಯೊಬ್ಬರ ಕಾಲಿನ ಮೇಲೆ ಹರಿದಿದೆ.
ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದ ವಸಂತ ಎಂಬ ಯುವಕನ ಕಾಲಿನ ಮೇಲೆ ಯಶ್ ವಾಹನ ಹರಿದಿದೆ. ಯುವಕನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


