ಬಿಜೆಪಿಯವರು ಶ್ರೀಮಂತರ ಪರವಾಗಿರುವ ಪಕ್ಷ. ಬಿಜೆಪಿಯವರು ಕೇಸರಿ ಶಾಲು ಹಾಕಿಕೊಂಡರೆ ದೇಶ ಭಕ್ತಿ ಬರುತ್ತದೆ ಎಂದುಕೊಂಡಿರುವುದು ಅವರ ತಪ್ಪು ಕಲ್ಪನೆ. ಇವರಿಗೆ ದೇಶದ ಬಗ್ಗೆ ಮಾತಾನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಪರಿಷತ್ತಿನಲ್ಲಿ ಆಯವ್ಯಯ ಭಾಷಣ ಕುರಿತ ಚರ್ಚೆಗೆ ಉತ್ತರ ನೀಡಿದರು. ನಮ್ಮ ಸರ್ಕಾರ ಆರ್ಥಿಕವಾಗಿ, ಸಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ರಾಜ್ಯದ ಜನರಿಗೆ ಶಕ್ತಿ ತುಂಬುವ ಸಲುವಾಗಿ ಜನಪರ, ಬಡವರ ಪರ ಬಜೆಟ್ ಮಂಡಿಸಿದೆ ಎಂದರು.
ಧರ್ಮ, ಜಾತಿ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ ಬಿಜೆಪಿಯವರು ಮಾಡುತ್ತಿದ್ದಾರೆ. ಸುಳ್ಳೇ ಬಿಜೆಪಿಯ ಮನೆ ದೇವರು. ಇವರ ನಾಟಕವನ್ನು ರಾಜ್ಯದ ಜನರು ನೋಡುತ್ತಿದ್ದಾರೆ. ಅಧಿಕಾರದಲ್ಲಿ ಇದ್ದಾಗ ಬಿಜೆಪಿಯವರಿಗೆ ಜನರ ಆರ್ಶೀವಾದ ಮಾಡಿಲ್ಲ. ಹಿಂಬಾಗಿಲಿನಿಂದ ಬಂದು ಅಧಿಕಾರ ಮಾಡುವುದಕ್ಕೆ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಸಿವು ಮುಕ್ತ ಭಾರತವನ್ನಾಗಿ ಮಾಡುತ್ತೇವೆ ಎಂದು ಹೇಳುವುದನ್ನು ಬಿಟ್ಟು, ಕಾಂಗ್ರೆಸ್ ಮುಕ್ತ ಭಾರತ ಎಂದು ಘೋಷಣೆ ಮಾಡುತ್ತಿದ್ದಾರೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


