ಬೆಂಗಳೂರು: ನಗರದ ಪ್ರತಿಷ್ಟಿತ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಪೋಟಗೊಂಡಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
ಹೆಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಲಹಳ್ಲಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಕೈ ತೊಳೆಯುವ ಜಾಗದಲ್ಲಿ ಸ್ಫೋಟ ಸಂಭವಿಸಿದೆ. ಸ್ಥಳದಲ್ಲಿ ಬ್ಯಾಟರಿ, ಬೋಲ್ಟ್‌ಗಳು ಪತ್ತೆಯಾಗಿದೆ. ಮಧ್ಯಾಹ್ನ 1:05ರ ವೇಳೆಗೆ ಈ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಒಟ್ಟು ಐವರು ಗಾಯಗೊಂಡಿದ್ದು ಒಬ್ಬರ ಸ್ಥಿತಿ ಗಂಭೀರವಾಗಿದೆ.
ಏಕಾಏಕಿ ಸ್ಪೋಟ ನಡೆದಿದ್ದು ಗ್ರಾಹಕರು ದಿಕ್ಕಾಪಾಲಾಗಿ ಓಡಿದ್ದಾರೆ. ಘಟನೆಯಿಂದ ಐವರಿಗೆ ಗಾಯಗಳಾಗಿದ್ದು. ಕೆಫೆಗೆ ಬಂದಿದ್ದ ಅಪರಿಚಿತ ವ್ಯಕ್ತಿಯ ಬ್ಯಾಗ್ ನಲ್ಲಿ ಸ್ಪೋಟಗೊಂಡಿದೆ ಎಂದು ಹೇಳಲಾಗಿದ್ದು, ಅಧಿಕೃತ ಮಾಹಿತಿ ತಿಳಿದು ಬರಬೇಕಿದೆ.
ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪೊಲೀಸರ ಜೊತೆ ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯದ (FSL) ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಯುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


