ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾರ್ಯಕರ್ತರೊಂದಿಗೆ ಈಗಾಗಲೇ ಸಭೆ ಮಾಡಿ ಬಂದಿದ್ದೇನೆ. ಸದ್ಯದ ಪರಿಸ್ಥಿತಿಯಲ್ಲಿ ಮೈಸೂರು, ಚಾಮರಾಜನಗರ ಎರಡರಲ್ಲೂ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ ಎಂಬ ನಿಲುವನ್ನು ಕಾರ್ಯಕರ್ತರ ಅಭಿಪ್ರಾಯವಾಗಿದೆ. ದೇಶದಲ್ಲಿ ಮೋದಿ ಅಲೆ ಇನ್ನಷ್ಟು ಹೆಚ್ಚಾಗಿದೆ.
ಸದ್ಯಕ್ಕೆ ರಾಜ್ಯದಲ್ಲಿ ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬಿದ್ದಿರುವ ಶೇ 35 ರಿಂದ 40 ರಷ್ಟು ಮತಗಳು ಬಿಜೆಪಿಗೆ ಬರುವ ಸಾಧ್ಯತೆ ಇದೆ. ಈಗಿನ ಸರ್ಕಾರ ಕುಣಿಯಲಾರದವಳು ನೆಲಡೊಂಡು ಅನ್ನುವ ಹಾಗೆ ಸರಿಯಾಗಿ ಆಡಳಿತ ಮಾಡದೇ ಕೇಂದ್ರದ ಮೇಲೆ ಬೊಟ್ಟು ಮಾಡುತ್ತಿದೆ. ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ. ಕುಡಿಯುವ ನೀರಿಗೂ ಹಾಹಾಕಾರವಾಗುತ್ತಿದೆ. ರಾಜ್ಯ ಸರ್ಕಾರ ಆಡಳಿತ ನಡೆಸುವಲ್ಲಿ ವಿಫಲವಾಗಿದೆ. ಎಸ್ ಇಪಿ ಟಿಎಸ್ಪಿ ಹಣವನ್ನ ಗ್ಯಾರಂಟಿ ಯೋಜನೆಗಳಿಗಾಗಿ ದುರುಪಯೋಗ ಮಾಡಿಕೊಂಡಿದೆ. ಅಂಬೇಡ್ಕರ್ ಬದುಕಿದ್ದಾಗ ಕಾಂಗ್ರೆಸ್ ಸರಿಯಾಗಿ ನಡೆಸಿಕೊಳ್ಳಲಿಲ್ಲ. ಅವರ ಭಾವ ಚಿತ್ರ ಬಳಸಲು ಕಾಂಗ್ರೆಸ್ ಗೆ ನೈತಿಕತೆ ಇಲ್ಲ ಎಂದು ಕಿಡಿಕಾರಿದರು.
ಪಾಕಿಸ್ತಾನ್ ಜಿಂದಾಬದ್ ಘೋಷಣೆ ಇದೇನು ಹೊಸದೇನಲ್ಲ. ಕಾಶ್ಮೀರದಲ್ಲಿ, ಬೇರೆ ಬೇರೆ ಕಡೆ ಕೇಳಿದ್ದವು. ಈಗ ವಿಧಾನಸೌಧದವರೆಗೂ ಬಂದಿದೆ. ಎಫ್ ಎಸ್ ಎಲ್ ತನಿಖೆ ಒಳಪಡಿಸಿದ್ದೇವೆ ಎನ್ನುತ್ತಾರೆ. ಆದರೆ ಮರಿ ಖರ್ಗೆ ಅವರು ತನಿಖಾಧಿಕಾರಿ ತರಾನೇ ಇಲ್ಲಿ ಘೋಷಣೆ ಕೂಗಿಲ್ಲ ಎಂದು ಹೇಳುತ್ತಾರೆ. ಈ ಪ್ರಕರಣ ಮುಚ್ಚಿ ಹಾಕುವ ಸಂಶಯ ನನಗಿದೆ. ಈ ಕೂಡಲೇ ಈ ಕುರಿತು ತನಿಖೆ ಆಗಬೇಕು. ನಾಲ್ಕು ಜನರನ್ನ ವಶಕ್ಕೆ ಪಡೆದಿದ್ದಾರೆ. ಈಗ ಪ್ರಿಯಾಂಕ್ ಖರ್ಗೆ ಅವರೇ ನೀವು ಏನು ಹೇಳ್ತೀರಿ..? ಎಂದು ಸಿಟಿ ರವಿ ಪ್ರಶ್ನಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


