ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಘಟನಾ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಗೃಹಸಚಿವ ಜಿ.ಪರಮೇಶ್ವರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಲ್ಲದೇ ಅಧಿಕಾರಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಸಿಸಿಬಿ ಪೊಲೀಸರು ಬಾಂಬ್ ಇಟ್ಟ ಆರೋಪಿ ಬಗ್ಗೆ ಮಾಹಿತಿ ಕಲೆ ಹಾಕೋದಕ್ಕೆ ಶುರು ಮಾಡಿದ್ದಾರೆ. ಆರೋಪಿ ಯಾರು ಏನು ಎಂಬುದು ಬಹುತೇಕ ಗೊತ್ತಾಗಿದೆ. ಆರೋಪಿ ಬಸ್ ನಲ್ಲಿ ಬಂದು, ಹೋಟೆಲ್ ನಲ್ಲಿ ರವೆ ಇಡ್ಲಿ ತಿಂದು ಆಮೇಲೆ ಬಾಂಬ್ ಇಟ್ಟು ಹೋಗಿದ್ದಾನೆ. ಬರುವಾಗ ಮಾಸ್ಕ್ ಧರಿಸಿ ಬಂದಿದ್ದಾನೆ ಎಂದು ತಿಳಿಸಿದ್ದಾರೆ. ಅಲ್ಲದೇ ಆರೋಪಿಗೆ ಸುಮಾರು 35 ವರ್ಷ ವಯಸ್ಸಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ.
ಹೋಟೆಲ್‌ನಲ್ಲಿ ಬ್ಯಾಗ್ ಇಟ್ಟು ಹೋದ 1 ಗಂಟೆ ಬಳಿಕ ಬಾಂಬ್ ಬ್ಲಾಸ್ಟ್ ಆಗಿದೆ. ಘಟನಾ ಸ್ಥಳದಲ್ಲಿ ಟೈಮರ್ ಸಹ ಪತ್ತೆಯಾಗಿದೆ. ವ್ಯಕ್ತಿಯ ಎಲ್ಲಾ ಚಟುವಟಿಕೆಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಶೀಘ್ರದಲ್ಲೇ ಸಿಕ್ಕಿಬಿಳುತ್ತಾನೆ ಎಂದು ಎಂದು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


