ಮೈಸೂರು: ಬೈಕ್ ಮತ್ತು ಕ್ಯಾಂಟರ್ ನಡುವಿನ ಭೀಕರ ಅಪಘಾತದಲ್ಲಿ ದಂಪತಿ ಪ್ರಾಣ ಕಳೆದುಕೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿನಡೆದಿದೆ. ದಂಪತಿ ಬೈಕ್ ನಲ್ಲಿ ಸಾಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮಂಜುನಾಥ ಬಡಾವಣೆಯ ನಿವಾಸಿ ರಾಜು (64) ಮತ್ತು ಅವರ ಪತ್ನಿ ಸುನಂದಾ (55)ಮೃತ ದುರ್ದೈವಿಗಳಾಗಿದ್ದಾರೆ.
ಮಂಜುನಾಥ್ ಅವರು ಬೈಕ್ ನಲ್ಲಿ ಸಾಗುತ್ತಿದ್ದಾಗ ಹುಣಸೂರು ಕಡೆಯಿಂದ ವೇಗವಾಗಿ ಬಂದ ಕ್ಯಾಂಟರ್ ಗೂಡ್ಸ್ ವಾಹನ ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತ ನಡೆಸಿ ವಾಹನ ನಿಲ್ಲಿಸದೆಯೇ ಗೂಡ್ಸ್ ಚಾಲಕ ಪರಾರಿಯಾಗಿದ್ದಾನೆ. ಬಳಿಕ ಸಾರ್ವಜನಿಕರೇ ಬೆನ್ನಟ್ಟಿ ವಾಹನವನ್ನು ತಡೆದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


