ಚಿಕ್ಕಬಳ್ಳಾಪುರ: ಚಲಿಸುತ್ತಿರುವ ಟಿಪ್ಪರ್ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಬಾಗೇಪಲ್ಲಿ ತಾಲ್ಲೂಕಿನ ಜೂಲಪಾಳ್ಯ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯಾಗಿರುವ ಗೋಪಾಲಯ್ಯ(59) ಮೃತ ದುರ್ದೈವಿಯಾಗಿದ್ದಾರೆ.
ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಗೋಪಾಲಯ್ಯ ಅವರು ಟಿಪ್ಪರ್ ನಲ್ಲಿ ಸಾಗುತ್ತಿದ್ದಾಗ ದುರಂತ ನಡೆದಿದೆ. ಸ್ಥಳಕ್ಕೆ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಭೇಟಿ ನೀಡಿದ್ದಾರೆ. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


