ರಾಮನಗರ: ರಾಮನಗರದ ಮಾಗಡಿ ತಾಲೂಕಿನ ಬೈರನಹಳ್ಳಿಯಲ್ಲಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಸವಾರರೊಬ್ಬರು ಮೃತಪಟ್ಟಿರುವ ದಾರುಣ ಘಟನೆ ನಡೆದಿದ್ದು, ಮೃತ ದುರ್ದೈವಿಯನ್ನು ನಂಜುಂಡಯ್ಯ (48) ಎಂದು ಗುರುತಿಸಲಾಗಿದೆ.
ನಂಜುಂಡಯ್ಯನವರು ಸೀಗೆಕುಪ್ಪೆ ಗ್ರಾಮ ಪಂಚಾಯತಿಯ ಸಾದಮಾರನಹಳ್ಳಿ ವಾಟರ್ ಮ್ಯಾನ್ ಆಗಿದ್ದರು. ಬೆಳಗಿನ ಜಾವ ಮಾಗಡಿಗೆ ಹೋಗಬೇಕಾದರೆ ಬೈಕ್ ಗೆ ಕಾರು ಡಿಕ್ಕಿಯಾಗಿದ್ದು, ಡಿಕ್ಕಿ ರಭಸಕ್ಕೆ ಕೆಳಗೆ ಹಾರಿ ಬಿದ್ದ ನಂಜುಂಡಯ್ಯ ಅವರು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.
ಮೃತದೇಹವನ್ನು ಮಾಗಡಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


