ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಬಿಡುಗಡೆ ಮಾಡಿರುವ ಎಫ್‌ಎಸ್‌ಎಲ್ ವರದಿಯ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ತಲೆಹಾಕಲು ಸಂವಾದ ದವರು ಯಾರು. ಇದಕ್ಕೂ ಅವರಿಗೂ ಏನು ಸಂಬಂಧ ಎಂದು ಕಿಡಿಕಾರಿದ್ದಾರೆ.
ಬಿಜೆಪಿಯವರು ಖಾಸಗಿ ಸಂಸ್ಥೆಗಳನ್ನು ಇಟ್ಟುಕೊಂಡು ಖಾಸಗಿಯಾಗಿ ಫೋರೆನ್ಸಿಕ್ ವರದಿಗಳನ್ನು ತರಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ ಮಾಡುತ್ತಿದ್ದಾರೆ. ವಿವಾದ ಮಾಡುವುದೇ ಮೊದಲನೇ ದೇಶದ್ರೋಹದ ಕೆಲಸವಾಗಿದೆ. ಇದು ಸಾಮಾನ್ಯ ಪ್ರಕರಣ ಅಲ್ಲ, ದೇಶದ್ರೋಹದ ಘೋಷಣೆ ಕೂಗಿದ್ದಾರೆ ಎಂದು ಬಿಜೆಪಿಯವರೇ ಹೇಳುತ್ತಿದ್ದು, ಅದನ್ನು ಬಿಜೆಪಿಯವರು ಖಾಸಗಿ ಸಂಸ್ಥೆಗಳ ಹತ್ತಿರ ಹೋಗಿ ಅದನ್ನು ಪಬ್ಲಿಕ್ ಮಾಡುತ್ತಿರುವುದು ಮೊದಲನೇ ದೇಶದ್ರೋಹದ ಕೆಲಸ ಎಂದು ಪ್ರಿಯಾಂಕ್ ಹರಿಹಾಯ್ದರು.
ಕ್ಲೂ ಫಾರ್ ಎವಿಡೆನ್ಸ್ ಫೋರೆನ್ಸಿಕ್ ಲ್ಯಾಬ್ ಅನ್ನೋ ಸಂಸ್ಥೆಯ ಕ್ರೆಡಿಬಿಲಿಟಿ ಏನು? ಎಂದು ಪ್ರಶ್ನಿಸಿದ ಸಚಿವರು, ಇವರು ಖಾಸಗಿಯಾಗಿ ಏನಾದರೂ ಮಾಡಿಕೊಳ್ಳಲಿ. ಆ ಸಂಸ್ಥೆಗೆ ಸರ್ಕಾರದ ಸರ್ಟಿಫಿಕೇಶನ್ ಇದಿಯೋ ತರಬೇತಿ ಇದೆಯೋ ನನಗೆ ಗೊತ್ತಿಲ್ಲ. ಇದ್ದರೂ ಕೂಡ ಆ ಲ್ಯಾಬ್ ಈ ವಿಚಾರದಲ್ಲಿ ಸ್ಥಳೀಯ ಪೊಲೀಸರಿಗೆ ಮತ್ತು ಸರ್ಕಾರದ ಗಮನಕ್ಕೆ ತಂದು ವರದಿ ಕೊಡಬೇಕಿತ್ತು ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


