ಮೈಸೂರು: ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ವ್ಯಕ್ತಿಯೊಬ್ಬ ಪತ್ನಿಗೆ ವಿಡಿಯೋ ಕಾಲ್ ಮಾಡುವ ವೇಳೆ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮನು ಕುಮಾರ್(26) ಮೃತ ದುರ್ದೈವಿಯಾಗಿದ್ದಾರೆ.
ಮೈಸೂರಿನಲ್ಲಿ ಬಿಹಾರ ಮೂಲದ ಮನು ಕುಮಾರ್ ಮೊಬೈಲ್ ನಲ್ಲಿ ಪತ್ನಿಗೆ ವಿಡಿಯೋ ಕಾಲ್ ಮಾಡುತ್ತಾ ರೈಲ್ವೇ ಟ್ರ್ಯಾಕ್ ಮೇಲೆ ನಡೆದುಕೊಂಡು ರೈಲ್ವೇ ಹಳಿ ಕ್ರಾಸಿಂಗ್ ಮಾಡಲು ಹೋಗಿದ್ದಾನೆ, ಈ ವೇಳೆ ರೈಲಿಗೆ ಸಿಲುಕಿ ಮೃತಪಟ್ಟಿದ್ದಾನೆ.
ಈ ವಿಷಯ ತಿಳಿದ ಪೊಲೀಸರು ಹಾಗೂ ರೈಲ್ವೇ ಅಧಿಕಾರಿಗಳು ಘಟನೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


