ಯುವತಿಯೊಬ್ಬಳು ತನ್ನ ಪ್ರಿಯಕರನನ್ನು ಮನೆಗೆ ಕರೆಸಿ ಆತನ ಗುಪ್ತಾಂಗವನ್ನು ಕತ್ತರಿಸಿ, ರಸ್ತೆಯಲ್ಲಿ ಎಸೆದಿರುವ ಅಮಾನವೀಯ ಘಟನೆ ಬಿಹಾರದ ಬಕ್ಸಾರ್ ನಲ್ಲಿ ನಡೆದಿದೆ.
ಘಟನೆಯ ವಿವರ: ಯುವಕನ ಸಹೋದರ ಪ್ರಮೋದ್ ಕುಮಾರ್ ಚೌಧರಿಯ ಪ್ರಕಾರ ಸಂತ್ರಸ್ತ ಅನಿಲ್ ತನ್ನ ಪ್ರೇಯಸಿ ಮನೆಗೆ ಕರೆದಿದ್ದಾಳೆ ಎಂದು ಆಕೆಯ ಮನೆಗೆ ಹೋಗಿದ್ದಾನೆ. ಇದೇ ಸಮಯದಲ್ಲಿ ಯುವತಿ ಆತನ ಮೇಲೆ ಹಲ್ಲೆ ನಡೆಸಿ, ಆತನ ಖಾಸಗಿ ಅಂಗಗಳನ್ನು ಕತ್ತರಿಸಿ ತನ್ನ ಮನೆಯ ಹೊರಗಿನ ರಸ್ತೆಯಲ್ಲಿ ಎಸೆದಿದ್ದಾಳೆ.ನಂತರ ಘಟನಾಸ್ಥಳದಿಂದ ಯುವತಿ ತಪ್ಪಿಸಿಕೊಂಡಿದ್ದಾಳೆ .
ಯುವತಿಯ ದಾಳಿಯಿಂದ ತೀವ್ರ ಗಾಯಗೊಂಡ ಆತನನ್ನು ಸ್ಥಳೀಯರು ಬಕ್ಸಾರ್ನ ವಿಕೆ ಗ್ಲೋಬಲ್ ಆಸ್ಪತ್ರೆಯಗೆ ದಾಖಲಿಸಿದ್ದಾರೆ ನಂತರ ವ್ಯಕ್ತಿಗೆ ಶಸ್ತ್ರ ಚಿಕಿತ್ಸೆ ನಡೆಸಿದ್ದು, ಸ್ಥಿತಿ ಗಂಭೀರವಾಗಿದ್ದುಆತನನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ
ಘಟನೆಯ ಬಗ್ಗೆ ನಮಗೆ ಮಾಹಿತಿ ದೊರೆತ ತಕ್ಷಣ ನಾವು ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಡುಮ್ರಾನ್ ಪೊಲೀಸ್ ಅಧಿಕಾರಿ ಅನಿಶಾ ರಾಣಾ ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


