ಚಿಕ್ಕಮಗಳೂರು: ಮಂಗನ ಕಾಯಿಲೆಗೆ 71 ವರ್ಷದ ವೃದ್ಧ ಬಲಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಎನ್.ಆರ್. ಪುರ ತಾಲೂಕಿನ ಮೇಲ್ಪಾಲ ಗ್ರಾಮದ ಬಸವ ಪೂಜಾರಿ ಮೃತ ದುರ್ದೈವಿಯಾಗಿದ್ದಾರೆ.
ಕಳೆದ 3 ದಿನದ ಹಿಂದೆ ವೃದ್ಧನಲ್ಲಿ KFD ಸೋಂಕು ಪತ್ತೆಯಾಗಿದ್ದು, ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ವೃದ್ಧ ಸಾವನಪ್ಪಿದ್ದಾರೆ. ಇದರೊಂದಿಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಈವರೆಗೆ KFDಯಿಂದ ಮೃತಪಟ್ಟವರ ಸಂಖ್ಯೆ 3ಕ್ಕೆ ಹೆಚ್ಚಳವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


