ಕೋಲಾರ: ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಭವಾನಿ(26) ಎಂದು ಗುರುತಿಸಲಾಗಿದೆ.
ನಿನ್ನೆ ಬೆಳಗ್ಗೆ ಹೆರಿಗೆಗೆಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಭವಾನಿ ಸಂಜೆ ವೇಳೆಗೆ ಹೆಣ್ಣುಮಗುವಿಗೆ ಜನ್ಮ ನೀಡಿದ್ದರು. ತಾಯಿ & ಮಗು ಇಬ್ಬರು ಆರೋಗ್ಯವಾಗಿದ್ದರು. ಆದರೆ ಮಧ್ಯರಾತ್ರಿ ವೇಳೆಗೆ ತೀವ್ರ ನೋವು ಕಾಣಿಸಿಕೊಂಡ ಹಿನ್ನಲೆ ವೈದ್ಯರು ಇಂಜೆಕ್ಷನ್ ನೀಡಿದ್ದಾರೆ. ಇದಾದ ನಂತರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿ ಭವಾನಿ ಕೊನೆಯುಸಿರೆಳೆದಿದ್ದಾರೆ.
ತೀವ್ರ ನೋವಿನಿಂದ ಬಳಲುತ್ತಿದ್ದ ಬಾಣಂತಿಗೆ ವೈದ್ಯರು ಇಂಜೆಕ್ಷನ್ ನೀಡಿದ ಸ್ವಲ್ಪ ಹೊತ್ತಿನ ನಂತರ ಬಾಣಂತಿ ಭವಾನಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಕುಟುಂಬಸ್ಥರು ಕೋಲಾರ ಜಿಲ್ಲಾಸ್ಪತ್ರೆ ವೈದ್ಯೆ ಡಾ.ಶಾಂತಾ ವಿರುದ್ಧ ಕೋಲಾರ ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪತ್ನಿ ಸಾವಿಗೆ ನ್ಯಾಯ ಬೇಕು ಎಂದು ಪತಿ ಗೋಪಾಲ್ ಸೇರಿದಂತೆ ಮೃತಳ ಕುಟುಂಬಸ್ಥರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


