ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ, ವೃಷಭಾವತಿ ಏತ ನೀರಾವರಿ ಯೋಜನೆಯ ಶಂಕುಸ್ಥಾಪನೆ ಮತ್ತು ನೆಲಮಂಗಲ ವಿಧಾನಸಭಾ ಕ್ಷೇತ್ರದ ವಿವಿಧ ಸರ್ಕಾರಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
3 ಸಾವಿರ ಕೋಟಿ ರೂಪಾಯಿಯನ್ನು ಕೆ.ಸಿ.ವ್ಯಾಲಿ ಮತ್ತು ಎವ್.ಎನ್.ವ್ಯಾಲಿಗೆ ಖರ್ಚು ಮತ್ತು ಈಗ ವೃಷಭಾವತಿ ಯೋಜನೆಯನ್ನು 2240 ಕೋಟಿ ರೂ. ಖರ್ಚು ಮಾಡಿ ಮಾಡುತ್ತಿದ್ದೇವೆ. ಇದರಿಂದ ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು ಜಿಲ್ಲೆಗಳ ಜನರ ನೀರಿನ ಬವಣೆ ಶಾಶ್ವತವಾಗಿ ತೀರುತ್ತದೆ. ಮೊದಲ ಹಂತದಲ್ಲಿ 70 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದೆ. ಇದರಿಂದ ನಾಲ್ಕೂ ಜಿಲ್ಲೆಗಳ ಅಂತರ್ಜಲ ಪ್ರಮಾಣ ವೃದ್ಧಿಯಾಗುತ್ತದೆ. ಜಮೀನುಗಳಿಗೆ ನೀರಿನ ಆಸರೆ ಹೆಚ್ಚಾಗಿ ಪರಿಣಾಮವಾಗಿ ಜನರ ಆರ್ಥಿಕ ಶಕ್ತಿಯೂ ಹೆಚ್ಚಾಗುತ್ತದೆ ಎಂದು ವಿವರಿಸಿದರು.
ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


