ಬಡವರಿಗಾಗಿ ಸೂಪರ್ ಸ್ಟಾರ್ ರಜನಿಕಾಂತ್ ಅವರ ಹೃದಯ ಮಿಡಿದಿದೆ. ಹೌದು,ಬಹುಸಂಖ್ಯಾ ಅಭಿಮಾನಿಗಳನ್ನು ಹೊಂದಿರುವ ನಟ ಇದೀಗ ೧೨ ಎಕರೆ ಎಕರೆ ಜಮೀನಿನಲ್ಲಿ ಆಸ್ಪತ್ರೆ ನಿರ್ಮಿಸಲು ತಲೈವಾ ಮುಂದಾಗಿದ್ದಾರೆ.
ಸದ್ಯ ‘ಲಾಲ್ ಸಲಾಂ’ ಸಿನಿಮಾದ ಬಳಿಕ ‘ವೆಟ್ಟೈಯನ್’ ಸಿನಿಮಾದಲ್ಲಿ ರಜನಿ ಬ್ಯುಸಿಯಾಗಿರುವ ನಟ ಇದೇ ವರ್ಷ ಈ ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆಯಾದರೂ ನಟ ರಜನಿಕಾಂತ್ ಬಡವರ ಚಿಕಿತ್ಸೆಗಾಗಿ ಚೆನ್ನೈನಲ್ಲಿ ಆಸ್ಪತ್ರೆ ನಿರ್ಮಿಸುತ್ತಿದ್ದಾರೆ. 12 ಎಕರೆ ಜಮೀನಿನಲ್ಲಿ ಆಸ್ಪತ್ರೆ ನಿರ್ಮಿಸಲು ತಲೈವಾ ಮುಂದಾಗಿದ್ದಾರೆ.
ಇತ್ತೀಚೆಗೆ ಸೂಪರ್ ಸ್ಟಾರ್ ಚೆನ್ನೈನ ತಿರುಪ್ಪೋರೂರಿನ ರಿಜಿಸ್ಟಾರ್ ಕಚೇರಿ ಭೇಟಿ ಕೊಟ್ಟಿದ್ದರು. ಅಲ್ಲಿ ಹೊಸದಾಗಿ ನಿರ್ಮಿಸಿರುವ ಜಮೀನಿನ ದಾಖಲೆ ಪತ್ರ ಪರಿಶೀಲನೆ ನಡೆಸಿದ್ದರು. ಇನ್ನು ತಿರುಪ್ಪೋರೂರಿಗೆ ತಲೈವಾ ಬರುತ್ತಾರೆಂದು ಗೊತ್ತಾಗುತ್ತಿದ್ದಂತೆ ಅಭಿಮಾನಿಗಳು ಸೇರಿದ್ದರು.
ಮಾಹಿತಿಯಂತೆಯೇ, ರಜನಿಕಾಂತ್ ಚೆನ್ನೈನಿಂದ ಒಎಂಆರ್ ರಸ್ತೆಯ ಮೂಲಕ ತಲಂಬೂರಿಗೆ ಹೋಗುವ ಮಾರ್ಗದಲ್ಲಿ ಆಸ್ಪತ್ರೆ ನಿರ್ಮಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಸುಮಾರು 12 ಎಕರೆ ಜಮೀನಿನಲ್ಲಿ ಆಸ್ಪತ್ರೆ ನಿರ್ಮಾಣವಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


