ಸಾರಂಗ ಬೇಟೆ ಮಾಡಿ, ಮಾಂಸ ಸಾಗಾಟ ಮಾಡಲು ಯತ್ನಿಸಿದ್ದು, ಆರು ಮಂದಿಯನ್ನು ಬಂಧಿಸಲಾಗಿದೆ. ಮಲೆ ಮಹದೇಶ್ವರ ವನ್ಯಜೀವಿ ಧಾಮನದ ಕೋಣನಕೆರೆ ಬಳಿ ಬಂಧನವಾಗಿದೆ. ಸರಕು ಸಾಗಾಣಿಕೆ ವಾಹನದಲ್ಲಿ ಜಿಂಕೆ ಮಾಂಸ ಸಾಗಾಟ ಮಾಡಲಾಗಿದ್ದು, ಖಚಿತ ಮಾಹಿತಿ ಮೇರೆಗೆ ಅರಣ್ಯ ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹನೂರು ಬಸಪ್ಪನ ದೊಡ್ಡಿ ಗ್ರಾಮದ ಇರ್ಫಾನ್, ವಹೀದ್, ಅಂಬಿಕಾಪುರದ ಕುಮಾರಸ್ವಾಮಿ, ಅಪ್ಪು, ಕಾಂಚಳ್ಳಿ ಗ್ರಾಮದ ಯಶ್ವಂತ್, ಕುರುಬರದೊಡ್ಡಿ ಗ್ರಾಮದ ಸೈಯದ್ ಆರೀಪ್ ಬಂಧಿತ ಆರೋಪಿಗಳು.
ಎಸಿಎಫ್ ಚಂದ್ರಶೇಖರ್ ಪಾಟೀಲ್ ,ರಾಮಾಪುರ ಆ ಎಫ್ ಓ ಕಾಂತರಾಜು ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಬಂಧಿತರಿಂದ ಸಾರಂಗ ಮಾಂಸ, ವಾಹನ ವಶಕ್ಕೆ ಪಡೆಯಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿಯು ಬಂಧಿತ ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


