ಬೆಂಗಳೂರು: ವೀಡಿಯೋದಲ್ಲಿ ಕಂತೆ ಕಂತೆ ಹಣ ತೋರಿಸಿ ವಂಚಿಸುತ್ತಿದ್ದವನನ್ನ ಬೆಂಗಳೂರಿನ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಂಚಕ ಕಿಶನ್ ಅಲಿಯಾಸ್ ಮಾಕಳಿ ಕಿಶನ್ ಬಂಧಿತ ಆರೋಪಿ.
ಈ ಆರೋಪಿ ಟ್ರೇಡಿಂಗ್ ಹೆಸರಿನಲ್ಲಿ ಅಮಾಯಕರಿಗೆ ಬಲೆ ಬೀಸಿ ಲಕ್ಷ ಲಕ್ಷ ಹಣ ಪಡೆದು ವಂಚನೆ ಮಾಡಿದ್ದಾನೆ. ನೂರಾರು ಜನ ಇತನನ್ನು ನಂಬಿ ಹಣ ಕಳೆದುಕೊಂಡಿದ್ದಾರೆ.
ವಂಚಕ ಕಿಶನ್, ನೀವು ಮಾಡಿದ ಹೂಡಿಕೆ ಹಣಕ್ಕೆ ಅಧಿಕ ಲಾಭಾಂಶ ನೀಡುವುದಾಗಿ ನಂಬಿಸಿ ಜನರನ್ನು ತನ್ನ ಬಲೆಗೆ ಬೀಳಿಸಿಕೊಳ್ಳುತ್ತಿದ್ದ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


