ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಳೆಯಿಂದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ. ಮಾ.7 ರಿಂದ ಐದು ದಿನಗಳ ಕಾಲ ನಡೆಯುವ ಜಾತ್ರ ಮಹೋತ್ಸವಕ್ಕೆ ಸಕಲ ಸಿದ್ದತೆ.
ಲಕ್ಷಾಂತರ ಜನ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದಿಂದ ಸಕಲ ಸಿದ್ದತೆಯಾಗಿದ್ದು, ಈಗಾಗಲೇ ಪಾದಯಾತ್ರೆ ಮೂಲಕ ಸಹಸ್ರಾರು ಭಕ್ತರು ಬರುತ್ತಿದ್ದಾರೆ. ಚಾಮರಾಜನಗರ, ಮೈಸೂರು, ಮಂಡ್ಯ,ರಾಮನಗರ,ಬೆಂಗಳೂರು ಗ್ರಾಮಾಂತರ ಭಾಗದಿಂದ ಹರಿದು ಬರಲಿದ್ದಾರೆ ಲಕ್ಷಾಂತರ ಭಕ್ತರು.
ಬರುವಂತಹ ಭಕ್ತರಿಗೆ ಮೂಲಭೂತ ಸೌಕರ್ಯಗಳಿಗೆ ತೊಂದರೆ ಆಗದಂತೆ ಪ್ರಾಧಿಕಾರದಿಂದ ಸಕಲ ವ್ಯವಸ್ಥೆ ಮಾಡಲಾಗಿದ್ದು, ಜಾತ್ರಾ ಮಹೋತ್ಸವ ಸಮಯದಲ್ಲಿ ದ್ವಿಚಕ್ರ ವಾಹಗಳಿಗೆ ನಿರ್ಬಂಧ ಹೇರಲಾಗಿದೆ.
ಸೂಕ್ತ ಪೋಲಿಸ್ ಬಂದೋಬಸ್ತ್ ಮಾಡಲಾಗಿದ್ದು, 400 ಕ್ಕೂ ಹೆಚ್ಚು ಪೋಲಿಸರು, 400 ಕ್ಕೂ ಹೆಚ್ಚು ಗೃಹರಕ್ಷಕ ದಳ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


