ಹೈದರಾಬಾದ್: ನವ ವಿವಾಹಿತರು ಸೇರಿ ಒಂದೇ ಕುಟುಂಬದ 5 ಮಂದಿ ಆಂಧ್ರಪ್ರದೇಶದ ನಂದ್ಯಾಳ ಅಲ್ಲಗಡ್ಡ ಮಂಡಲದ ನಲ್ಲಗಟ್ಲ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತವೊಂದರಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತರು ಹೈದರಾಬಾದ್ ಮೂಲದವರು. ಬಾಲ ಕಿರಣ್, ಕಾವ್ಯಾ, ಮಂತ್ರಿ ಲಕ್ಷ್ಮೀ, ಮಂತ್ರಿ ರವೀಂದರ್ ಮತ್ತು ಉದಯ್ ಮೃತರು.
ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಈ ಕುಟುಂಬ ಹಿಂದಿರುಗುತ್ತಿದ್ದ ವೇಳೆ ರಸ್ತೆ ಬದಿ ನಿಲ್ಲಿಸಿದ್ದ ಟ್ರಕ್ ಅನ್ನು ಕಾರು ಚಾಲಕ ಗಮನಿಸದೇ ಇದ್ದುದು ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಫೆಬ್ರವರಿ 29ರಂದು ಬಾಲ ಕಿರಣ್ ಮತ್ತು ಕಾವ್ಯಾ ಅವರ ವಿವಾಹ ನಡೆದಿತ್ತು. ಈ ಹಿನ್ನೆಲೆಯಲ್ಲಿ ಅವರು ಕುಟುಂಬ ಸಮೇತ ತಿರುಪತಿಯ ತಿರುಮಲ ದರ್ಶನಕ್ಕೆ ತೆರಳಿದ್ದರುʼʼ ಎಂದು ಅವರು ವಿವರಿಸಿದ್ದಾರೆ.
ಅಪಘಾತದ ನಂತರ ಪೊಲೀಸರು ಸಂತ್ರಸ್ತರೊಬ್ಬರ ಮೊಬೈಲ್ ಫೋನ್‌ನಿಂದ ಅವರ ಸಂಬಂಧಿಕರಿಗೆ ಕರೆ ಮಾಡಿ, ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


