ಖೇಲೋ ಇಂಡಿಯಾ ಕ್ರೀಡಾ ಕೂಟಗಳಲ್ಲಿ ಪದಕ ಗೆಲ್ಲುವ ಅಥ್ಲೀಟ್ ಗಳಿಗೆ ಇನ್ನು ಮುಂದೆ ಸರ್ಕಾರಿ ಹುದ್ದೆ ಪಡೆಯುವುದಕ್ಕೆ ಅರ್ಹರು ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
ಬುಧವಾರ ಅನುರಾಗ್ ಠಾಕೂರ್ “ಅತ್ಯುತ್ತಮ ಕ್ರೀಡಾ ವ್ಯವಸ್ಥೆ, ತಳಮಟ್ಟದಲ್ಲೇ ಪ್ರತಿಭೆಗಳನ್ನು ಪೋಷಿಸುವುದು ಪ್ರಧಾನಿ ಮೋದಿ ಅವರ ಕನಸು. ಇದಕ್ಕೆ ಅನುಗುಣವಾಗಿ ಖೇಲೋ ಇಂಡಿಯಾದ ಯೂತ್, ಯುನಿವರ್ಸಿಟಿ, ಪ್ಯಾರಾ ಹಾಗೂ ಚಳಿಗಾಲದ ಕ್ರೀಡಾಕೂಟಗಳಲ್ಲಿ ಪದಕ ಗೆದ್ದವರು ಇನ್ನು ಮುಂದೆ ಸರ್ಕಾರಿ ಹುದ್ದೆಗೆ ಅರ್ಹತೆ ಪಡೆಯಲಿದ್ದಾರೆ” ಎಂದು ಎಕ್ಸ್ ನಲ್ಲಿ ತಿಳಿಸಿದ್ದಾರೆ.
ಸಿಬ್ಬಂದಿ ಹಾಗೂ ತರಬೇತಿ ಇಲಾಖೆಯು ಕ್ರೀಡಾ ಸಚಿವಾಲಯದೊಂದಿಗೆ ಸಮಾಲೋಚಿಸಿ ಕ್ರೀಡಾಪಟುಗಳು ಸರ್ಕಾರಿ ಉದ್ಯೋಗ ಪಡೆಯಲು ಎದುರು ನೋಡುತ್ತಿರುವವರಿಗೆ ಈ ಪರಿಷ್ಕೃತ ಆದೇಶ ಸಹಾಯಕವಾಗಲಿದೆ ಎಂದು ಠಾಕೂರ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


