ತುಮಕೂರು: ಬೆಂಗಳೂರಿನ ರಾಮೇಶ್ವರಂ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯು ತುಮಕೂರು ನಗರದ ಕಡೆಗೆ ಓಡಾಡಿರುವ ಶಂಕೆಯ ಮೇರೆಗೆ ಬೆಂಗಳೂರು ಪೊಲೀಸ ಅಧಿಕಾರಿಗಳ ತಂಡ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳ ತಂಡ ನಗರದ ಪ್ರಮುಖ ಸಿಸಿಟಿವಿಗಳ ಪರಿಶೀಲನೆಯಲ್ಲಿ ತೊಡಗಿದೆ.
ನಿನ್ನೆ ರಾತ್ರಿ ದಿಢೀರ್ ಎಂದು ಬಂದ ಬೆಂಗಳೂರು ಪೊಲೀಸರ ತಂಡ ಸ್ಥಳೀಯ ಪೊಲೀಸ್ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರ ಅವರ ಜೊತೆ ತುಮಕೂರು ಮಹಾನಗರ ಪಾಲಿಕೆ ಆವರಣದಲ್ಲಿರುವ ಸ್ಮಾರ್ಟ್ ಸಿಟಿ ಯ ಸಿಸಿಟಿವಿ ಕಂಟ್ರೋಲ್ ರೂಮ್ ಗೆ ತೆರಳಿ ಸಾಕಷ್ಟ್ ಮಾಹಿತಿಯನ್ನು ಕಲೆ ಹಾಕಿತು.
ಈ ನಡುವೆ ತುಮಕೂರು ನಗರದ ಹಾಗೂ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿರುವ ಸಿಸಿಟಿವಿಗಳ ವೀಡಿಯೊವನ್ನು ಪಡೆದುಕೊಂಡಿತು. ಅಲ್ಲದೆ ತಡ ರಾತ್ರಿಯವರೆಗೂ ಪೊಲೀಸರ ತಂಡ ಸುದೀರ್ಘ ಪರಿಶೀಲನೆ ನಡೆಸಿತು.
ವಿಡಿಯೋ ನೋಡಿ:
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296