ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲಿ ಇನ್ನೂ ಯಾರನ್ನೂ ಬಂಧಿಸಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್, ರಾಮೇಶ್ವರಂ ಕೆಫೆ ಬಾಂಬ್ ಪ್ರಕರಣದಲ್ಲಿ ಕೆಲವು ಮಹತ್ವದ ಸುಳಿವು ಸಿಕ್ಕಿದೆ. ಬಟ್ಟೆ ಬದಲಾಯಿಸಿಕೊಂಡ ಸುಳಿವು ಸಿಕ್ಕಿದೆ. ಅದಷ್ಟು ಬೇಗ ಆರೋಪಿಯನ್ನ ಹಿಡಿಯುತ್ತಾರೆ. ಬಸ್ ನಲ್ಲಿ ಪ್ರಯಾಣ ಮಾಡಿರೋದು ಗೊತ್ತಾಗಿದೆ. ಎಲ್ಲದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನ ಕರೆದು ವಿಚಾರಣೆ ನಡೆಸಲಾಗಿದೆ. ಈವರೆಗೆ ಯಾರನ್ನು ಬಂಧಿಸಿಲ್ಲ. ಆರೋಪಿಯನ್ನ ಅರೆಸ್ಟ್ ಮಾಡಿದ್ದಾರೆ ಎಂದು ಸಿಎಂ ಗೊಂದಲದಲ್ಲೇ ಹೇಳಿದ್ದಾರೆ. ಯಾರನ್ನು ಬಂಧಿಸಿಲ್ಲ ತನಿಖೆ ಮುಂದುವರೆಯುತ್ತಿದೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


