ಶಿವಮೊಗ್ಗ: ಸೊರಬ ಪುರಸಭೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಲಂಚ ಸ್ವೀಕರಿಸುವ ವೇಳೆ ರೆವಿನ್ಯೂ ಇನ್ ಸ್ಪೆಕ್ಟರ್ (ಕಂದಾಯ ನಿರೀಕ್ಷಕ) ವಿನಾಯಕ, ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೊನ್ನಾವರದ ಪ್ರತಿಭಾ ಎಂ. ನಾಯ್ಕ ಎನ್ನುವವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ದೂರುದಾರೆ ಪ್ರತಿಭಾ ಹಳೇ ಸೊರಬ ವ್ಯಾಪ್ತಿಯ ಕಸಬಾ ಹೋಬಳಿಯಲ್ಲಿ ಖಾಲಿ ನಿವೇಶನ ಹೊಂದಿದ್ದು, ಗ್ರಾಮ ಪಂಚಾಯಿತಿಯಿಂದ ಸೊರಬ ಪುರಸಭೆಗೆ ಸೇರಿದ್ದ ಇ ಸ್ವತ್ತಿನ ಜಾಗ ಸೇರಿತ್ತು. ಇದರಿಂದಾಗಿ ಪುರಸಭೆಗೆ ಸೇರಿಸಿ ಖಾತೆ ಮಾಡಿಕೊಡುವಂತೆ ಪ್ರತಿಭಾ ಅರ್ಜಿ ಸಲ್ಲಿಸಿದ್ದರು.
ಆದರೆ, ಕಂದಾಯ ನಿರೀಕ್ಷಕ ಅರ್ಜಿದಾರರ ಕೆಲಸ ಮಾಡಿಕೊಡಲು 40 ಸಾವಿರ ರೂಪಾಯಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದು, ಇದರಿಂದ ಪ್ರತಿಭಾ ಅವರು ಲೋಕಾಯುಕ್ತರಿಗೆ ದೂರು ನೀಡಿದ್ದಾರೆ. ಇದರಂತೆ ಲೋಕಾಯುಕ್ತ ಡಿಎಸ್ ಪಿ ಉಮೇಶ್ ಈಶ್ವರ ನಾಯ್ಕ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, 40 ಸಾವಿರ ರೂಪಾಯಿ ಲಂಚದ ಹಣ ಸ್ವೀಕರಿಸುವಾಗ ರೆವಿನ್ಯೂ ಇನ್ಸ್ ಪೆಕ್ಟರ್ ನನ್ನು ರೆಡ್ ಹ್ಯಾಂಡ್ ಆಗಿ ವಶಕ್ಕೆ ಪಡೆದುಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


