ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪುಡಿರೌಡಿಗಳು ಅಟ್ಟಹಾಸ ಮೆರೆದಿದ್ದು, ಯುವಕನ ಮೇಲೆ ವಿನಾಕಾರಣ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಗೈಬುಖಾನ್ ಹಕೀಮ್ (29) ಹಲ್ಲೆಗೊಳಗಾದ ಯುವಕನಾಗಿದ್ದಾನೆ.
ಹಲ್ಲೆಗೊಳಗಾದ ಗೈಬುಖಾನ್ ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದು, ಕುಡಿದ ಮತ್ತಿನಲ್ಲಿ ಜಗಳ ತೆಗೆದ ಕೆಲ ಪುಡಿ ರೌಡಿಗಳು ಕಲ್ಲಿನಿಂದ ಹೊಡೆದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಪುಂಡರ ಅಟ್ಟಹಾಸದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


