ಲಕ್ನೋ: ಬಿಜೆಪಿ ಮುಖಂಡ ಪ್ರಮೋದ್ ಯಾದವ್ ಅವರನ್ನು ಉತ್ತರ ಪ್ರದೇಶದ ಜೌನ್ ಪುರ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದ ಘಟನೆ ನಡೆದಿದೆ. ಪತ್ರಿಕೆ ಕೊಡುವ ನೆಪದಲ್ಲಿ ಪ್ರಮೋದ್ ಯಾದವ್ (55) ಅವರನ್ನು ತಡೆದ ದುಷ್ಕರ್ಮಿಗಳು 3 ಬಾರಿ ಗುಂಡು ಹಾರಿಸಿದ್ದು, ಬಳಿಕ ದಾಳಿಕೋರರು ಸ್ಥಳದಿಂದ ಸ್ವಲ್ಪ ದೂರದಲ್ಲಿ ಬೈಕನ್ನು ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಘಟನೆಯ ನಂತರ ಯಾದವ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.
ದುಷ್ಕರ್ಮಿಗಳ ಬಂಧನಕ್ಕೆ ಹಲವಾರು ತಂಡಗಳನ್ನು ನಿಯೋಜಿಸಲಾಗಿದೆ ಮತ್ತು ಪ್ರಾಥಮಿಕ ತನಿಖೆಯಿಂದ ಕೆಲವು ಪ್ರಮುಖ ಸುಳಿವುಗಳು ದೊರೆತಿವೆ ಎಂದು ಜೌನ್ ಪುರ ಪೊಲೀಸ್ ವರಿಷ್ಠಾಧಿಕಾರಿ ಅಜೈಪಾಲ್ ಶರ್ಮಾ ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


