ಗದಗ: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ವೇಗವಾಗಿ ಸಾಗುತ್ತಿದ್ದ ಕ್ಯಾಂಟರ್ ಒಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿ, ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ.
ಮೃತರು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದವರಾಗಿದ್ದು, ಕುಂದಗೋಳ ದಿಂದ ಕೊಪ್ಪಳ ಜಿಲ್ಲೆಯ ಕನಕಗಿರಿ ಹೋಗುತ್ತಿದ್ದಾಗ ಘಟನೆ ನಡೆದಿದೆ. ನವೀನ್ ಕುಂಬಾರ್ (23) ಸ್ಥಳದಲ್ಲೇ ಮೃತಪಟ್ಟರೆ, ನಾಗಪ್ಪ ಕಾಳಿ (23), ಗಂಗಪ್ಪ ಅಕ್ಕಿ (22) ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟವರಾಗಿದ್ದಾರೆ.
ಮೂವರು ಗಾಯಾಳುಗಳಿಗೆ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆಯುತ್ತಿದ್ದಂತೆಯೇ ಚಾಲಕ ಪರಾರಿಯಾಗಿದ್ದಾನೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


