ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದ ಪೀಠಾಧ್ಯಕ್ಷರಾಗಿದ್ದ ಬಾಲಮಂಜುನಾಥ್ ಸ್ವಾಮೀಜಿಯನ್ನು ಪೋಕ್ಸೋ ಕೇಸ್ ನಡಿ ತಡರಾತ್ರಿ ಪೊಲೀಸರು ಬಂಧಿಸಿದ್ದಾರೆ.
ಕಳೆದ ಫೆಬ್ರುವರಿ 10 ರಂದು ತುಮಕೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಆಗಿತ್ತು. ಚರ್ಮ ರೋಗಕ್ಕೆ ಚಿಕಿತ್ಸೆ ಕೊಡುವ ನೆಪದಲ್ಲಿ ನನ್ನ ಬೆತ್ತಲೆ ವಿಡಿಯೋ ಮಾಡಿಕೊಂಡು, ನನ್ನನ್ನು ಬೆದರಿಸಿ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದಾರೆಂದು ದೂರು ದಾಖಲಾಗಿತ್ತು. ಸ್ವಾಮೀಜಿಯ ಆಪ್ತ ಸಹಾಯಕ ಅಭಿಲಾಷ್ ಎಂಬಾತನಿಂದ ಎಫ್ಐಆರ್ ದಾಖಲು ಆಗಿತ್ತು.
ಈ ಹಿಂದೆ ಸ್ವಾಮೀಜಿಯ ಸೇವಕ ಅಭಿಷೇಕ್ ಅಂಡ್ ಟೀಂ ನಿಂದ ಬೆದರಿಕೆ ಹಾಕಿ ಹಣಕ್ಕೆ ಡಿಮ್ಯಾಂಡ್ ಇಡಲಾಗಿದೆ ಎಂದು, ಒಟ್ಟು 6 ಜನರ ಮೇಲೆ ದೂರು ನೀಡಲಾಗಿತ್ತು. ಈ ಪ್ರಕರಣ ಬೆನ್ನಲ್ಲೇ ಸ್ವಾಮೀಜಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಮಠದಲ್ಲೇ ಅಪ್ರಾಪ್ತ ಬಾಲಕಿಗೆ ಸ್ವಾಮೀಜಿ ಲೈಂಗಿಕ ಕಿರುಕುಳ ಕೊಟ್ಟಿರುವ ಬಗ್ಗೆ ಮಾಹಿತಿ ಪಡೆದು ಅಭಿಷೇಕ್ ಕೊಟ್ಟ ಮಾಹಿತಿ ಮೇರೆಗೆ ತಡರಾತ್ರಿ ಮಠಕ್ಕೆ ತೆರಳಿ ಪರಿಶೀಲನೆ ನಡೆಸಿದ ಪೊಲೀಸರು. ಪರಿಶೀಲನೆ ವೇಳೆ ಸ್ವಾಮೀಜಿಯ ಅಸಲಿ ಮುಖವಾಡ ಬಯಲು ಆಗಿದೆ.
ಬಾಲಮಂಜುನಾಥ್ ಸ್ವಾಮೀಜಿ ಹಾಗೂ ಆತನ ಆಪ್ತ ಸಹಾಯಕ ಅಭಿಲಾಷ್ ವಿರುದ್ಧ ಪೋಕ್ಸೋ ಕೇಸ್ ದಾಖಲು ಆಗಿದೆ. ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲು ಆಗಿದ್ದು ತಡರಾತ್ರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ಎಸ್ ಪಿ ಅಶೋಕ್ ಕೆವಿ ನೇತೃತ್ವದಲ್ಲಿ ಬಂಧಿಸಲಾಗಿದ್ದು ಪೊಲೀಸರಿಂದ ತನಿಖೆ ಮುಂದುವರಿದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296