ದೆಹಲಿ: ತಂದೆಯೇ ಮಗನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದ್ದು, ಮದುವೆ ಗೆಲವೇ ಗಂಟೆಗಳು ಬಾಕಿ ಇರುವಾಗ ಈ ಘಟನೆ ನಡೆದಿದೆ. 29 ವರ್ಷದ ಜಿಮ್ ತರಬೇತುದಾರ ಗೌರವ್ ಸಿಂಘಾಲ್ ಮೃತ ದುರ್ದೈವಿಯಾಗಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದ ಗೌರವ್ ಎಂಬಾತನನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಯಿತಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಮದುವೆಗೆ ಇನ್ನು ಕೆಲವೇ ಗಂಟೆಗಳು ಬಾಕಿ ಇರುವಾಗ ಜಿಮ್ ಟ್ರೈನರ್ನನ್ನು ತಂದೆಯೇ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಮನೆಯಲ್ಲಿ ಮುಂಜಾನೆ, ಮದುವೆಗೂ ಕೆಲವೇ ಗಂಟೆಗಳ ಮೊದಲು ಅವರ ಎದೆಗೆ 15 ಬಾರಿ ಇರಿಯಲಾಗಿದ್ದು, ಕೊಲೆಯ ಪ್ರಮುಖ ಆರೋಪಿಯಾಗಿರುವ ತಂದೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಕೊಲೆಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ, ಇಲ್ಲಿಯವರೆಗೆ, ತಂದೆ ಮತ್ತು ಮಗನ ನಡುವೆ ವೈಮನಸ್ಸು ಇತ್ತು ಎಂದಷ್ಟೇ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಮುಖ ಆರೋಪಿಯ ಬಂಧನದ ನಂತರ ಎಲ್ಲವೂ ಸ್ಪಷ್ಟವಾಗುತ್ತದೆ ಎಂದು ಅಧಿಕಾರಿ ಹೇಳಿದರು. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಏಮ್ಸ್ ಶವಾಗಾರಕ್ಕೆ ರವಾನಿಸಿದ್ದು, ಕಾನೂನು ಪ್ರಕ್ರಿಯೆ ಆರಂಭಿಸಿದ್ದಾರೆ.
ಗೌರವ್ ಗೆ ವಿವಾಹವಾಗಲು ಇಷ್ಟವಿರಲಿಲ್ಲ, ಆದರೆ ಆತನ ತಂದೆ ಒತ್ತಡ ಹೇರುತ್ತಿದ್ದರು ಎಂಬುದು ಪ್ರಕರಣದ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸಿಂಘಾಲ್ ಬೇರೊಬ್ಬ ಮಹಿಳೆಯನ್ನು ಪ್ರೀತಿಸುತ್ತಿದ್ದರು ಮತ್ತು ಅವಳನ್ನು ಮದುವೆಯಾಗಲು ಬಯಸಿದ್ದರು. ಆ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನೂ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


