nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ

    February 12, 2026

    ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ

    February 12, 2026

    ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ

    February 12, 2026
    Facebook Twitter Instagram
    ಟ್ರೆಂಡಿಂಗ್
    • ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ
    • ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ
    • ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ
    • ಗುಬ್ಬಿ:  ಶ್ರೀ ಕೆಂಪಮ್ಮ ದೇವಿ, ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವ
    • ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!
    • ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು
    • ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
    • ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಳಧರ ಸರ್ಕಾರಿ ಶಾಲೆಯ ಜಮೀನು ಕಬಳಿಕೆ: ಕ್ರಮಕೈಗೊಳ್ಳದ ಅಧಿಕಾರಿಗಳಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸಮನ್ಸ್
    ತುಮಕೂರು March 9, 2024

    ಬೆಳಧರ ಸರ್ಕಾರಿ ಶಾಲೆಯ ಜಮೀನು ಕಬಳಿಕೆ: ಕ್ರಮಕೈಗೊಳ್ಳದ ಅಧಿಕಾರಿಗಳಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸಮನ್ಸ್

    By adminMarch 9, 2024No Comments2 Mins Read
    beladhara school

    ತುಮಕೂರು: ಶಾಲಾ ಆವರಣ ಕಬಳಿಕೆಯಿಂದ ಮಕ್ಕಳ ಶಿಕ್ಷಣಕ್ಕೆ ಧಕ್ಕೆಯಾಗುತ್ತಿರುವ ಬಗೆಗಿನ ದೂರಿಗೆ ಸಂಬಂಧಿಸಿದಂತೆ ನಿಗದಿತ ಅವಧಿಯೊಳಗೆ ವರದಿ ಸಲ್ಲಿಸದ ತುಮಕೂರು ತಾಲ್ಲೂಕು ತಹಶೀಲ್ದಾರರು, ಕ್ಷೇತ್ರಶಿಕ್ಷಣಾಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಬೆಳಧರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯಶಿಕ್ಷಕರಿಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸಮನ್ಸ್ ಜಾರಿಗೊಳಿಸಿದ್ದು, ವಿಚಾರಣೆ ಹಾಜರಾಗಲು ಸೂಚಿಸಿದೆ.

    ತುಮಕೂರು ತಾಲ್ಲೂಕಿನ ಬೆಳಧರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಆವರಣವನ್ನು ಕೆಲವು ವ್ಯಕ್ತಿಗಳು ಕಬಳಿಸಲು ಅತಿಕ್ರಮ ಪ್ರವೇಶ ಮಾಡುತ್ತಿದ್ದು, ಇದರಿಂದಾಗಿ ಮಕ್ಕಳ ಶಿಕ್ಷಣಕ್ಕೆ ಧಕ್ಕೆಯಾಗುತ್ತಿರುವ ಬಗ್ಗೆ ಆಯೋಗಕ್ಕೆ ದೂರು ಸಲ್ಲಿಕೆಯಾಗಿತ್ತು. ಈ ಸಂಬಂಧ ಶಾಲೆಯ ಆಸ್ತಿಯನ್ನು ರಕ್ಷಿಸುವ ಸಂಬಂಧ ಸೂಕ್ತ ಕ್ರಮ ಕೈಗೊಂಡು,  ಕೈಗೊಂಡ ವರದಿಯನ್ನು ಆಯೋಗಕ್ಕೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿತ್ತು.


    Provided by
    Provided by

    ಆದರೆ ನಿಗದಿತ ಅವಧಿಯೊಳಗೆ ಯಾವುದೇ ವರದಿ ಬಂದಿಲ್ಲವಾದುದರಿಂದ ತುಮಕೂರು ತಾಲ್ಲೂಕು ತಹಶೀಲ್ದಾರರು, ಕ್ಷೇತ್ರಶಿಕ್ಷಣಾಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಶಾಲೆಯ ಮುಖ್ಯಶಿಕ್ಷಕರಿಗೆ ಆಯೋಗವು ಸಮನ್ಸ್ ಜಾರಿಗೊಳಿಸಿದ್ದು ಮಾರ್ಚ್ 19ರಂದು ಈ ಬಗ್ಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.

    ಬೆಳಧರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣವನ್ನು ಖಾಸಗಿ ವ್ಯಕ್ತಿಗಳು ಕಬಳಿಸಲು ಯತ್ನಿಸುತ್ತಿರುವ ಬಗ್ಗೆ  ರಫೀಕ್ ಪಾಶಾ ಎಂಬವರು ದೂರು ನೀಡಿದ್ದರು. ಈ ಬಗ್ಗೆ ಸೂಕ್ತ ಕ್ರಮಕೈಗೊಂಡು, ಕೈಗೊಂಡ ಕ್ರಮದ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಲಾಗಿತ್ತು. ಆದರೆ ಈವರೆಗೆ ವರದಿ ಬಾರದ ಕಾರಣ ತಹಶೀಲ್ದಾರರು, ಕ್ಷೇತ್ರಶಿಕ್ಷಣಾಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಶಾಲೆಯ ಮುಖ್ಯಶಿಕ್ಷಕರಿಗೆ ಮೊದಲ ಹಂತದಲ್ಲಿ ನೋಟಿಸ್ ಜಾರಿ ಮಾಡಲಾಗಿದ್ದು, ವಿಚಾರಣೆಯ ಬಳಿಕ ಮುಂದಿನ ಕ್ರಮಕೈಗೊಳ್ಳಲಾಗುವುದು.

    –ಡಾ.ತಿಪ್ಪೇಸ್ವಾಮಿ ಕೆ.ಟಿ., ಸದಸ್ಯರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು.


    ತುಮಕೂರು ತಾಲ್ಲೂಕಿನ ಬೆಳಧರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಕಾಂಪೌಂಡ್ ಮಾಡಿಸುವ ಒಂದು ಸಣ್ಣ ವಿಚಾರಕ್ಕಾಗಿ ಮಕ್ಕಳ ರಕ್ಷಣಾ ಆಯೋಗ, ಲೋಕಾಯುಕ್ತದವರೆಗೂ ಹೋಗಬೇಕಾಯಿತು. ಜಿಲ್ಲಾಡಳಿತಕ್ಕೆ ಸತತ ಮನವಿ ಮಾಡಿದರೂ ಮೇಲ್ನೋಟಕ್ಕೆ ಕ್ರಮಕೈಗೊಳ್ಳುವಂತೆ ಮಾಡಿತೇ ವಿನಃ ಸರಿಯಾದ ಕ್ರಮಕೈಗೊಳ್ಳಲಿಲ್ಲ. ಸರ್ಕಾರಿ ಶಾಲೆಯ ಕಾಂಪೌಂಡ್ ಹಾಕಿಸುವ ಒಂದು ವಿಚಾರಕ್ಕೆ ಹೋರಾಟಗಾರರು ರಾಜ್ಯಮಟ್ಟದಲ್ಲಿ ಹೋರಾಟ ಮಾಡಬೇಕಾಗಿ ಬಂದಿರುವುದು ತುಮಕೂರು ಜಿಲ್ಲಾಡಳಿತ ನಿಷ್ಕ್ರೀಯವಾಗಿರುವುದಕ್ಕೆ ಸಾಕ್ಷಿಯಾಗಿದೆ.

    –ಹೆಚ್.ಎಂ.ವೆಂಕಟೇಶ್,  ನೈಜ ಹೋರಾಟಗಾರರ ಸಂಘ, ಬೆಂಗಳೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ

    February 12, 2026

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ

    February 12, 2026

    ಹುಳಿಯಾರು: ಸಮೀಪದ ತೋರೆಮನೆ ಗ್ರಾಮದಲ್ಲಿ ನೆಲೆಸಿರುವ ಗ್ರಾಮದೇವತೆಗಳಾದ ಶ್ರೀ ಅಂತರಗಟ್ಟೆ ಕರಿಯಮ್ಮ ದೇವಿ, ಹಳೇಊರಮ್ಮ ದೇವಿ ಹಾಗೂ ಚೌಡೇಶ್ವರಿ ಅಮ್ಮನವರ…

    ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ

    February 12, 2026

    ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ

    February 12, 2026

    ಗುಬ್ಬಿ:  ಶ್ರೀ ಕೆಂಪಮ್ಮ ದೇವಿ, ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವ

    February 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.