ಪಾವಗಡ: ತಾಲ್ಲೂಕಿನ ಅರಸೀಕೆರೆ ಗ್ರಾಮದ ಸರ್ಕಾರಿ ಪ್ರೌಡಶಾಲೆಯಲ್ಲಿ ಪ್ರತಿ ವರ್ಷ ದಂತೆ ಈ ವರ್ಷವು ಕೂಡಾ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ, ಶಾರದಾ ಪೂಜಾ ಕಾರ್ಯಕ್ರಮ ಹಾಗೂ ಶಾಲಾ ವಾರ್ಷಿಕೋತ್ಸವ ವನ್ನು ಆಚರಿಸಲಾಯಿತು.
ರೇಣುಕರಾಜ್. ಜಿ.ಹೆಚ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಅತಿಥಿಗಳಾದ ರಂಗಸ್ವಾಮಿ ಎಂ. ವಿದ್ಯಾರ್ಥಿಗಳಿಗೆ ಹಿತನುಡಿಗಳನ್ನು ತಿಳಿಸಿದರು. ಮುಖ್ಯ ಶಿಕ್ಷಕರಾದ ಗೋವಿಂದಪ್ಪ ಓದಿನ ಮಹತ್ವ ವಿವರಿಸಿದರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿಧ್ಯಾರ್ಥಿಗಳಿಗೆ ಅತಿಥಿಗಳಿಂದ ಬಹುಮಾನ ವಿತರಣೆ ಮಾಡಲಾಯಿತು. ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕ್ರೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಗುರುರಾಜ್, ಉಪಾಧ್ಯಕ್ಷೆ ಲಕ್ಕಮ್ಮ, ಸದಸ್ಯರುಗಳಾದ ಜಯರಾಮಪ್ಪ, ರತ್ನಮ್ಮ, ಗೀತಮ್ಮ, ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾದ ಸಿದ್ದೇಶ್ವರಪ್ಪ, ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಶಿಕ್ಷಕ ವರ್ಗ,ಹಳೆಯ ವಿದ್ಯಾರ್ಥಿಗಳು, ಪೋಷಕರುಗಳು ಭಾಗವಹಿಸಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


