ಕೊರಟಗೆರೆ: ಶಿವರಾತ್ರಿ ಹಬ್ಬದ ಪ್ರಯುಕ್ತ ಹೊಳೆ ನಂಜುಂಡೇಶ್ವರ ದೇವಸ್ಥಾನದಲ್ಲಿ ಭಕ್ತ ಸಾಗರವೇ ನೆರೆದಿತ್ತು. ಮುಂಜಾನೆ 3 ಗಂಟೆಯಿಂದಲೇ ನಂಜುಡೇಶ್ವರನ ದರ್ಶನಕ್ಕೆ ಭಕ್ತರು ಆಗಮಿಸಿದರು.
ಹೊಳೆ ನಂಜುಂಡೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕದೊಂದಿಗೆ ಅರ್ಚಕರು ಭಕ್ತರ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಿದರು
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೊರಟಗೆರೆ ಕ್ಷೇತ್ರದಲ್ಲಿ ಎಲ್ಲ ದೇವಸ್ಥಾನಗಳಲ್ಲೂ ವಿಶೇಷ ಪೂಜೆ ಸಲ್ಲಿಸಲಾಯಿತು. ಶಿವರಾತ್ರಿ ಹಬ್ಬದ ಪ್ರಯುಕ್ತ ಭಕ್ತರು ಶಿವನನ್ನು ಕಣ್ತುಂಬಿ ಕೊಂಡರು.
ಕೊರಟಗೆರೆಯ ಗವಿ ಗಂಗಾಧರೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ಸಂಜೆ 6 ಗಂಟೆಗೆ ಲಕ್ಷದೀಪೋತ್ಸವ ನಡೆಯಿತು. ಹೊಳೆ ನಂಜುಂಡೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ರಾತ್ರಿ 9 ತನಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಯಿತು.
ದೇವರ ದರ್ಶನಕ್ಕೆ ಬಂದ ಭಕ್ತರಿಗೆ ಬೆಳಗಿನ ಸಂಜೆವರೆಗೂ ಮಜ್ಜಿಗೆ ಪಾನಕದ ಜೊತೆ ಪ್ರಸಾದ ವಿನಿಯೋಗ ಮಾಡಲಾಯಿತು.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


