ಚಿಕ್ಕಬಳ್ಳಾಪುರ: ಪತಿಯೋರ್ವ ಪತ್ನಿಯನ್ನು ಚಾಕುವಿನಿಂದ ಇರಿದು, ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚಿನ್ನಕಾಯಲಪಲ್ಲಿ ಗ್ರಾಮದಲ್ಲಿ ನಡೆದಿದೆ.
ನರಸಮ್ಮ(48) ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಪತಿ ಗಂಗುಲಪ್ಪ ತನ್ನ ಪತ್ನಿಯನ್ನು ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ.
ಆರೋಪಿ ನರಸಮ್ಮಳನ್ನು ಜಾನುವಾರುಗಳಿಗೆ ಹುಲ್ಲು ತರುವ ನೆಪದಲ್ಲಿ ಕರೆದೊಯ್ದು ಹುಲ್ಲಿನ ಬಣವೆ ಬಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು ಹೇಳಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಆರೋಪಿ ಗಂಗುಲಪ್ಪನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೌಟುಂಬಿಕ ಕಲಹವೇ ಹತ್ಯೆಗೆ ಕಾರಣ ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ.
ಘಟನಾ ಸ್ಥಳಕ್ಕೆ ಪಾತಪಾಳ್ಯ ಠಾಣೆ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


