ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯನ್ನು ಬ್ಯಾನ್ ಮಾಡಬೇಕೆಂದು ಈ ಹಿಂದೆಯೇ ಚರ್ಚೆಯ ವಿಷಯವಾಗಿತ್ತು. ಬಳಿಕ ಕೆಲವೊಂದು ರಾಜ್ಯದಲ್ಲಿ ಇದನ್ನು ಬ್ಯಾನ್ ಮಾಡಲಾಗಿತ್ತು. ಇದೀಗ ಕರ್ನಾಟಕದಲ್ಲಿಯೂ ಬ್ಯಾನ್ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ.
ಹೌದು, ಕೆಲವೊಂದು ಹಾನಿಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆ ಗೋವಾ, ತಮಿಳುನಾಡು ಈ ಆಹಾರಗಳನ್ನು ಬ್ಯಾನ್ ಮಾಡಿದೆ. ಈ ಹಿನ್ನೆಲೆ ಕರ್ನಾಟಕದಲ್ಲೂ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿ ಕಲರ್ ಜೆಲ್ಲಿಗಳನ್ನು ಸ್ಯಾಂಪಲ್ ಟೆಸ್ಟ್ ಗೆ ಒಳಪಡಿಸಿಲಾಗಿತ್ತು. ಇದೀಗ ಕಾಟನ್ ಕ್ಯಾಂಡಿ ಜೆಲ್ಲಿ ಹಾಗೂ ಗೋಬಿ ಮಂಚೂರಿಯ ಟೇಸ್ಟಿಂಗ್ ರಿಪೋರ್ಟ್ ಆರೋಗ್ಯ ಇಲಾಖೆ ಕೈ ಸೇರಿದೆ.
ಆಹಾರ ಮತ್ತು ಸುರಕ್ಷತಾ ಇಲಾಖೆಯಿಂದ ರಿಪೋರ್ಟ್ ಆಧರಿಸಿ ನಿರ್ಧಾರ ಕೈಗೊಳ್ಳಲಿದ್ದು, ಸೋಮವಾರ (ಮಾ.11) ಆರೋಗ್ಯ ಸಚಿವರು ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸ್ಯಾಂಪಲ್‌ನಲ್ಲಿ ಹಾನಿಕಾರಕ ಅಂಶ ಪತ್ತೆಯಾಗಿದೆ. ಕಾಟನ್ ಕ್ಯಾಂಡಿಯಲ್ಲಿ ಹಾನಿಕಾರಕ ಅಂಶ ಇರುವುದು ಪತ್ತೆಯಾಗಿದ್ದು, ಗೋಬಿ ಮಂಚೂರಿಯಲ್ಲಿ Sunset Yellow ಮತ್ತು Tartrazine ಅಂಶ ಇರುವುದು ಪತ್ತೆಯಾಗಿದೆ. ರಾಸಾಯನಿಕ ಕಲಬೆರಕೆ ಇರುವುದರಿಂದ ಕಾಟನ್ ಕ್ಯಾಂಡಿ ಬ್ಯಾನ್ ಮಾಡುವ ಸಾಧ್ಯತೆ ಹೆಚ್ಚಿದೆ.
ತಮಿಳುನಾಡಿನ ಸರ್ಕಾರಿ ಪ್ರಯೋಗಾಲಯದಲ್ಲಿ ನಡೆಸಲಾದ ಪರೀಕ್ಷೆಗಳಲ್ಲಿ ಬಾಂಬೆ ಮಿಠಾಯಿಯಲ್ಲಿ ರೊಡಮೈನ್-ಬಿ ಅಂಶ ಇರುವುದು ದೃಢಪಟ್ಟಿದೆ. ಹೀಗಾಗಿ ಅಲ್ಲಿ ಬ್ಯಾನ್ ಆಗಿತ್ತು. ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಕ್ಯಾನ್ಸರ್ ರೋಗ ಬರುವ ಸಾಧ್ಯತೆ ಇದೆ ಎಂಬ ಅಂಶ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆದ್ದರಿಂದ ರಾಜ್ಯದಲ್ಲೂ ಬಾಂಬೆ ಮಿಠಾಯಿಯ ಮಾದರಿಗಳನ್ನು ತೆಗೆದುಕೊಳ್ಳಲಾಗಿತ್ತು.
ರೊಡಮೈನ್ ಬಿ ಸೇವನೆಯಿಂದ ಕ್ಯಾನ್ಸರ್ ಬರುವ ಸಾಧ್ಯತೆಗಳಿವೆ ಎನ್ನಲಾಗಿದೆ. ಕಣ್ಣು ದೃಷ್ಟಿ ಸಮಸ್ಯೆ ಹಾಗೂ ಲಿವರ್ ಸಂಬಂಧಿ ಸಮಸ್ಯೆ ಎದುರಾಗುವ ಸಾಧ್ಯತೆಗಳಿವೆ. ಗೋಬಿಯಲ್ಲಿ ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ಖಾಯಿಲೆ ಬರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಲಾಗಿದೆ. ಯಾವುದಕ್ಕೂ ಸೋಮವಾರ ಮಹತ್ವದ ಸುದ್ದಿಗೋಷ್ಠಿಯಲ್ಲಿ ಆರೋಗ್ಯ ಸಚಿವರು ಈ ಬಗ್ಗೆ ಘೋಷಣೆ ಮಾಡೋ ಸಾಧ್ಯತೆಯಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


