ತುಮಕೂರು: ಉದ್ಯೋಗ ಕೌಶಲ್ಯ ತರಬೇತಿ ಹಾಗೂ ಬೋಧಕರಿಗೆ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮವು ಮಾರ್ಚ್ 11ರ ಸೋಮವಾರ ಬೆಳಿಗ್ಗೆ 9:30 ಗಂಟೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಲಿದೆ ಎಂದು ಪ್ರಾಂಶುಪಾಲರಾದ ಪ್ರೊ.ತರನ್ನುಂ ನಿಖತ್ ಎಸ್. ತಿಳಿಸಿದ್ದಾರೆ.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರಿನಲ್ಲಿ ಸೋಮವಾರ ನಡೆಯುವ ಕಾರ್ಯಾಗಾರಕ್ಕೆ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕರ್ ಎಂ.ಎಸ್ ಅವರು ಚಾಲನೆ ನೀಡುವರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರಾದ ಜಗದೀಶ್ ಜಿ., ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕರಾದ ಪ್ರಸನ್ನ ಹೆಚ್., ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರಾದ ಡಾ.ಎಸ್.ಬಿ.ಅಪ್ಪಾಜಿಗೌಡ, ಕಾಲೇಜು ಶಿಕ್ಷಣ ಇಲಾಖೆ ಮುಖ್ಯ ಆಡಳಿತಾಧಿಕಾರಿಗಳಾದ ಶೋಭಾ ಟಿ.ಆರ್, ವಾಧ್ವಾನಿ ಪೌಂಡೇಶನ್ ಉಪಾಧ್ಯಕ್ಷರಾದ ಹರಿ ಬಾಲಚಂದನ್ ಹಾಗೂ ವಿಶೇಷ ಆಹ್ವಾನಿತರಾಗಿ ಕಾಲೇಜು ಶಿಕ್ಷಣ ಇಲಾಖೆ ಹೆಚ್ಚುವರಿ ನಿರ್ದೇಶಕರಾದ ಡಾ.ಶೋಭಾ ಜಿ., ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರಾದ ಡಾ.ರಾಮಕೃಷ್ಣರೆಡ್ಡಿ ಕೆ. ಮತ್ತು ವಾಧ್ವಾನಿ ಫೌಂಡೇಶನ್ ತರಬೇತಿದಾರರಾದ ಸ್ವಾತಿ ಉಪಸ್ಥಿತರಿರುವರು.
ಉದ್ಯೋಗ ಕೌಶಲ್ಯ ತರಬೇತಿ ಹಾಗೂ ಬೋಧಕರಿಗೆ ಕಾರ್ಯಾಗಾರದ ಅಧ್ಯಕ್ಷತೆಯನ್ನು ತುಮಕೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ತರನ್ನುಂ ನಿಖತ್.ಎಸ್ ಅವರು ವಹಿಸಲಿರುವರು.
ದಿನಾಂಕ:11-03-2024 ಹಾಗೂ 12-03-2024 ಎರಡು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಿಂದ ಇಬ್ಬರಂತೆ ಬೋಧಕರು ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


