ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಶ್ಕೋವಾ ವಿಶ್ವ ಸುಂದರಿ. ಭಾರತದಲ್ಲಿ ನಡೆದ ಸ್ಪರ್ಧೆಯಲ್ಲಿ 28 ವರ್ಷಗಳ ನಂತರ, ಭಾರತೀಯ ಸುಂದರಿ ಸಿನಿ ಶೆಟ್ಟಿ ಮೊದಲ ಎಂಟರೊಳಗೆ ಸ್ಥಾನ ಪಡೆದರು. ಆದರೆ ನಂತರ ಅಗ್ರ 4 ರೊಳಗೆ ತಲುಪಲು ವಿಫಲರಾಗಿ, ಭಾರತದ ಅವಕಾಶಗಳನ್ನು ಕೊನೆಗೊಳಿಸಿದರು.
ಮುಂಬೈನ JIO ವರ್ಲ್ಡ್ ಕನ್ವೆನ್ಷನ್ ಸೆಂಟರ್ ನಲ್ಲಿ ವಿಶ್ವ ಸುಂದರಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಲೆಬನಾನ್ ನ ಯಾಸ್ಮಿನ್, ಟ್ರಿನಿಡಾಡ್ ನ ಎಚ್ ಎಚ್ ಅಬ್ರಹಾಮ್ಸ್ ಮತ್ತು ಬೋಟ್ಸ್ ವಾನಾದ ಲೆಸೊಗೊ ಅವರು ಕ್ರಿಸ್ಟಿನಾ ಅವರನ್ನು ಹೊರತುಪಡಿಸಿ ಕೊನೆಯ ನಾಲ್ಕರಲ್ಲಿ ಸ್ಥಾನ ಪಡೆದಿದ್ದಾರೆ. ಮಿಸ್ ಲೆಬನಾನ್ ಮೊದಲ ರನ್ನರ್ ಅಪ್.
ಈ ಸಂದರ್ಭದಲ್ಲಿ ರಿಲಯನ್ಸ್ ಫೌಂಡೇಶನ್ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಮುಖೇಶ್ ಅಂಬಾನಿ ಅವರಿಗೆ ವಿಶ್ವ ಸುಂದರಿ ಮಾನವೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿಶ್ವ ಸುಂದರಿ ಸಂಸ್ಥೆಯ ಅಧ್ಯಕ್ಷೆ ಜೂಲಿಯಾ ಮೊರ್ಲಿ ಪ್ರಶಸ್ತಿ ಪ್ರದಾನ ಮಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


