ಬೀದರ್: ಲಾರಿಯೊಂದನ್ನು ತಡೆದು ಪರಿಶೀಲಿಸಿದ ಪೊಲೀಸರು ಅದರಲ್ಲಿದ್ದ 1596 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪಳ್ಳಿ ಚೆಕ್ ಪೋಸ್ಟ್ ಬಳಿ ನಡೆದಿದೆ.
ವನಮಾರಪಳ್ಳಿ ಚೆಕ್ ಪೋಸ್ಟ್ ಬಳಿ NCB ಬೆಂಗಳೂರು ಮತ್ತು ಬೀದರ್ ಜಿಲ್ಲಾ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಗಾಂಜಾ ಸಹಿತ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಆಂಧ್ರಪ್ರದೇಶದಿಂದ ಮಹಾರಾಷ್ಟ್ರದೊಳಗೆ ತೆರಳುತ್ತಿದ್ದಂತಹ ಲಾರಿ, ಮಾರ್ಗ ಬದಲಿಸಿ ಕರ್ನಾಟಕದೊಳಗೆ ಪ್ರವೇಶಿಸಲು ಯತ್ನಿಸಿದೆ. ಚೆಕ್ ಪೋಸ್ಟ್ ಬಳಿ ಪೊಲೀಸರು ಲಾರಿಯನ್ನು ಪರಿಶೀಲನೆ ನಡೆಸಿದ ವೇಳೆ ಲಾರಿಯಲ್ಲಿ ಗಾಂಜಾ ಪತ್ತೆಯಾಗಿದೆ.
ಸದ್ಯ ಮಾಲು ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಲಾರಿಯ ಮಾಲಿಕನನ್ನು ಬಂಧಿಸಲು ಕಾರ್ಯಾಚರಣೆ ನಡೆಸುತ್ತಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಚನ್ನಬಸವಣ್ಣ ಎಸ್.ಎಲ್. ತಿಳಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296